ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿಷೇಕ್ ಅಂಬರೀಶ್ 
ಸಿನಿಮಾ ಸುದ್ದಿ

ನವೆಂಬರ್ 24ಕ್ಕೆ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದೆ. ಕೆಲವು ಅನಿಶ್ಚಿತತೆ ನಂತರ ಚಿತ್ರ ತಯಾರಕರು ಕೊನೆಗೂ ರಿಲೀಸ್ ಡೇಟ್ ಫಿಕ್ಸ್  ಮಾಡಿದ್ದು, ನವೆಂಬರ್ 24 ರಂದು ಥಿಯೇಟರ್‌ಗಳಲ್ಲಿ ಬರಲಿದೆ ಎಂದು ಖಚಿತಪಡಿಸಿದ್ದಾರೆ.

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದೆ. ಕೆಲವು ಅನಿಶ್ಚಿತತೆ ನಂತರ ಚಿತ್ರ ತಯಾರಕರು ಕೊನೆಗೂ ರಿಲೀಸ್ ಡೇಟ್ ಫಿಕ್ಸ್  ಮಾಡಿದ್ದು, ನವೆಂಬರ್ 24 ರಂದು ಥಿಯೇಟರ್‌ಗಳಲ್ಲಿ ಬರಲಿದೆ ಎಂದು ಖಚಿತಪಡಿಸಿದ್ದಾರೆ.

ಗುರುವಾರ ತಂಡದಿಂದ ಅಧಿಕೃತ ಘೋಷಣೆ ಮಾಡಲಾಗಿದೆ. ಈ ಹಿಂದೆ ದುನಿಯಾ, ಜಾಕಿ, ಅಣ್ಣಾ ಬಾಂಡ್, ಮತ್ತು ಟಗರು ಮುಂತಾದ ಹಿಟ್‌ಗಳನ್ನು ನೀಡಿದ ಖ್ಯಾತ ನಿರ್ದೇಶಕ ಸೂರಿ ನಿರ್ದೇಶಿಸಿದ ಈ ಚಿತ್ರದಲ್ಲಿ ರಚಿತಾ ರಾಮ್, ಪ್ರಿಯಾಂಕಾ ಕುಮಾರ್ ಜೊತೆಗೆ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸಿದ್ದಾರೆ.

 ಜಯಣ್ಣ ವಿತರಣೆ ಹೊಣೆ ಹೊತ್ತಿದ್ದು, ರಾಜ್ಯಾದ್ಯಂತ  400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ. ಕುತೂಹಲಕಾರಿಯಾಗಿ, ಬ್ಯಾಡ್ ಮ್ಯಾನರ್ಸ್ ರಿಲೀಸ್ ಗೂ ಮುನ್ನಾವೇ ಈಗಾಗಲೇ ಉತ್ತಮ ಗಳಿಕೆ ಕಂಡಿದೆ.   ಆನಂದ್ ಆಡಿಯೋ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದ್ದು, ನಿರ್ಮಾಪಕರು ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಗಣನೀಯ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ.

ಅಲ್ಲದೇ, ಪ್ರತಿಷ್ಠಿತ ಚಾನೆಲ್ ವೊಂದು ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಒಟ್ಟಾರೇ ಬಿಡುಗಡೆಗೂ ರೂ. 13 ಕೋಟಿ ಗಳಿಸಿದೆ ಎನ್ನಲಾಗುತ್ತಿದೆ.ಸ್ಟುಡಿಯೋ 18 ಬ್ಯಾನರ್ ಅಡಿಯಲ್ಲಿ ಕೆ ಎಂ ಸುಧೀರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಡುಗಳು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿವೆ.

ಬ್ಯಾಡ್ ಮ್ಯಾನರ್ಸ್ ಅಭಿಷೇಕ್ ಅವರನ್ನು ಕಮರ್ಷಿಯಲ್ ಆಗಿ ಯಶಸ್ವಿ ನಾಯಕನಾಗಿ ಮಾಡುತ್ತದೆ ಎಂದು ನಿರ್ದೇಶಕ ಸೂರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT