ಯುವ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ದೊಡ್ಮನೆ ಕುಡಿ ಯುವ ರಾಜಕುಮಾರ್ ಅಭಿನಯದ 'ಯುವ' ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ!

ಸಂತೋಷ್ ಆನಂದ್‌ರಾಮ್ ನಿರ್ದೇಶನದ 'ಯುವ' ಚಿತ್ರದ ಮೂಲಕ ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿರುವ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ಆರಂಭದಲ್ಲಿ ಡಿಸೆಂಬರ್ 22ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿತ್ತು. ಈಗ ಯುವ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲು ಹೊಂಬಾಳೆ ಫಿಲ್ಮ್ಸ್ ನಿರ್ಧರಿಸಿದೆ. 

ಸಂತೋಷ್ ಆನಂದ್‌ರಾಮ್ ನಿರ್ದೇಶನದ 'ಯುವ' ಚಿತ್ರದ ಮೂಲಕ ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅವರನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿರುವ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ಆರಂಭದಲ್ಲಿ ಡಿಸೆಂಬರ್ 22ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ, ಈಗ ಆ ದಿನದಂದು 'ಸಲಾರ್' ಬಿಡುಗಡೆಯಾಗಲಿದ್ದು, ಯುವ ಚಿತ್ರದ ಬಿಡುಗಡೆಯನ್ನು ಮುಂದೂಡಲು ಹೊಂಬಾಳೆ ಫಿಲ್ಮ್ಸ್ ನಿರ್ಧರಿಸಿದೆ. 

ಇದೀಗ ಯುವ ಸಿನಿಮಾ ಮುಂದಿನ ವರ್ಷ ಮಾರ್ಚ್ 28ರಂದು ಬಿಡುಗಡೆಯಾಗಲಿದೆ. ಮೇರುನಟ ಡಾ. ರಾಜ್‌ಕುಮಾರ್ ಕುಟುಂಬದಿಂದ ಬಂದಿರುವ ಯುವ ರಾಜ್‌ಕುಮಾರ್ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಯುವ ಸಿನಿಮಾ ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳಲ್ಲಿ ವ್ಯಾಪಕ ನಿರೀಕ್ಷೆ ಉಂಟುಮಾಡಿದೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳಿಗೆ ಹೆಸರುವಾಸಿಯಾದ ವಿಜಯ್ ಕಿರಗಂದೂರು ನಿರ್ಮಿಸಿದ ಯುವ ಸಿನಿಮಾ, ಯೂತ್‌ಫುಲ್ ಆ್ಯಕ್ಷನ್ ಎಂಟರ್‌ಟೈನರ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. 

ಚಿತ್ರದಲ್ಲಿ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ