ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮಲಯಾಳಂ ನಟಿ ರೆಂಜೂಷಾ ಮೆನನ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ!

ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ಸೋಮವಾರ ತಿರುವನಂತಪುರಂನಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರೆಂಜೂಷಾ ಮೆನನ್
Shilpa D
Updated On : 30 Oct 2023, 3:18 pm

ತಿರುವನಂತಪುರ: ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ಸೋಮವಾರ ತಿರುವನಂತಪುರಂನಲ್ಲಿರುವ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

35 ವರ್ಷದ ರೆಂಜೂಷಾ ತನ್ನ ಕುಟುಂಬದೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ಎಷ್ಟು ಹೊತ್ತಾದರೂ ರೂಮಿನ ಬಾಗಿಲು ತೆಗೆಯದ ಕಾರಣ ಮನೆಯವರಿಗೆ ಅನುಮಾನ ಬಂದಿತ್ತು. ನಂತರ ಬಾಗಿಲು ಮುರಿದು  ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಮಹಿಳಾ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಆತ್ಮಹತ್ಯೆ

Advertisement

Advertisement

ಸದ್ಯ ವಿಚಾರಣೆ ನಡೆಯುತ್ತಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 35 ವರ್ಷದ ರೆಂಜೂಷಾ ಮೆನನ್ ಆನಂದರಾಗಂನಂತಹ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು.ಕೆಲವು ಮಲಯಾಳಂ ಚಿತ್ರಗಳಲ್ಲೂ ನಟಿಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿಯಲು ಶ್ರೀಕರಿಯಂ  ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments