ಗನ್ಸ್ ಅಂಡ್ ರೋಸಸ್ ಚಿತ್ರದಲ್ಲಿ ನಟ ಕಿಶೋರ್ 
ಸಿನಿಮಾ ಸುದ್ದಿ

ಮತ್ತೆ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ನಟ ಕಿಶೋರ್; ಗನ್ಸ್ ಅಂಡ್ ರೋಸಸ್ ಚಿತ್ರತಂಡ ಸೇರ್ಪಡೆ!

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ. ಎಚ್‌ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ.

ಎಚ್‌ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕಿಶೋರ್ ಅವರು ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರತಂಡ ಅದರ ಕೆಲವು ಫೋಟೊಗಳನ್ನು ಹಂಚಿಕೊಂಡಿದೆ. 

ಎಚ್‌ಆರ್ ನಟರಾಜ್ ಈ ಯೋಜನೆಗೆ ಬಂಡವಾಳ ಹೂಡುತ್ತಿದ್ದು, ಶರತ್ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರವು ಇತ್ತೀಚೆಗಷ್ಟೇ ಪ್ರಾರಂಭವಾದರೂ, ಈಗಾಗಲೇ ಚಿತ್ರೀಕರಣ ಅಂತಿಮ ಹಂತ ತಲುಪಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಗನ್ಸ್ ಅಂಡ್ ರೋಸಸ್ ಚಿತ್ರಕ್ಕೆ ಶಶಿಕುಮಾರ್ ಅವರ ಸಂಗೀತ ಸಂಯೋಜನೆ, ಜನಾರ್ಧನ್ ಅವರ ಛಾಯಾಗ್ರಹಣ ಮತ್ತು ಸಂಜೀವ್ ರೆಡ್ಡಿ ಅವರ ಸಂಕಲನವಿದೆ. ಚಿತ್ರವು ಗ್ರಾಮೀಣ ಭಾಗದ ಅಂಶಗಳೊಂದಿಗೆ ತುಂಬಿದ ರೋಮ್ಯಾಂಟಿಕ್ ಎಂಟರ್‌ಟೈನರ್ ಆಗಿದೆ.

ಯಶಿಕಾ ನಿಷ್ಕಲ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶೋಭರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವತ್ಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮತ್ತು ಡೈಮಂಡ್ ರಾಜಣ್ಣ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT