ರಜನಿಕಾಂತ್ ಗೆ ಚೆಕ್ ನೀಡಿದ ಕಲಾನಿಧಿ ಮಾರನ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಜೈಲರ್: ರಜನಿಗೆ ಸನ್ ಪಿಕ್ಚರ್ಸ್ ಭಾರಿ ಗಿಫ್ಟ್; 100 ಕೋಟಿ ರೂ. ಚೆಕ್ ವಿತರಣೆ?

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ದೇಶಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದ್ದು, 600 ಕೋಟಿ ರೂ. ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ದೇಶಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದ್ದು, ರೂ. 600 ಕೋಟಿ ರೂ. ಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

ಜೈಲರ್ ಯಶಸ್ವಿ ಪ್ರದರ್ಶನದಿಂದ ಖುಷಿಯಾಗಿರುವ ಚಿತ್ರ ನಿರ್ಮಾಪಕರು ಹಾಗೂ ಸನ್ ಪಿಕ್ಚರ್ಸ್ ಮಾಲೀಕರು ಆದ ಕಲಾನಿಧಿ ಮಾರನ್ ಅವರು ರಜನಿಕಾಂತ್ ಅವರಿಗೆ 100 ಕೋಟಿ ರೂಪಾಯಿ ಉಡುಗೊರೆ ರೂಪದ ಚೆಕ್ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತ ಫೋಟೋವೊಂದನ್ನು ಸನ್ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.

ಅಲ್ಲದೇ, ಸನ್ ಪಿಕ್ಚರ್ಸ್ ಸಂಸ್ಥೆಯಿಂದ ರಜನಿಕಾಂತ್ ಅವರಿಗೆ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಸಹ ಉಡುಗೊರೆಯಾಗಿ ನೀಡಲಾಗಿದೆ. ಇದರ ವಿಡಿಯೋವನ್ನು ನಿರ್ಮಾಣ ಸಂಸ್ಥೆ ಸಾಮಾಜಿಕ ಜಲಾತಣಗಳಲ್ಲಿ ಹಂಚಿಕೊಂಡಿದೆ. 

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ರಜನಿಕಾಂತ್, ಶಿವರಾಜ್ ಕುಮಾರ್ ಹಾಗೂ ಮೋಹನ್ ಲಾಲ್ ಅಭಿನಯದ ಜೈಲರ್ ಚಿತ್ರ ಆಗಸ್ಟ್ 10 ರಂದು ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ