ನಟ ಪ್ರಕಾಶ್ ರಾಜ್ 
ಸಿನಿಮಾ ಸುದ್ದಿ

'ತನಾತನಿ ಸಂಸತ್ತು' ಫೋಟೋದೊಂದಿಗೆ ಮತ್ತೆ ಪ್ರಕಾಶ್ ರಾಜ್ ಟ್ವೀಟ್!

ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ್ ಸ್ಟಾಲಿನ್ ನೀಡಿರುವ ಹೇಳಿಕೆಗೆ ಬೆಂಬಲಿಸುವ ನಿಟ್ಟಿನಲ್ಲಿ ನಿನ್ನೆಯಷ್ಟೇ ಸನಾತನಿಗಳನ್ನು 'ತನಾತನಿಗಳು' ಎಂದು ಗೇಲಿ ಮಾಡಿದ್ದ ನಟ ಪ್ರಕಾಶ್ ರಾಜ್ ಇಂದು ಮತ್ತೊಂದು ವಿವಾದಿತ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ್ ಸ್ಟಾಲಿನ್ ನೀಡಿರುವ ಹೇಳಿಕೆಗೆ ಬೆಂಬಲಿಸುವ ನಿಟ್ಟಿನಲ್ಲಿ ನಿನ್ನೆಯಷ್ಟೇ ಸನಾತನಿಗಳನ್ನು 'ತನಾತನಿಗಳು' ಎಂದು ಗೇಲಿ ಮಾಡಿದ್ದ ನಟ ಪ್ರಕಾಶ್ ರಾಜ್ ಇಂದು ಮತ್ತೊಂದು ವಿವಾದಿತ ಟ್ವೀಟ್ ಮಾಡಿದ್ದಾರೆ.

ಸಾಧು ಸಂತರೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರ ಕೇಂದ್ರ ಸಚಿವರು ಇರುವ ಫೋಟೋವೊಂದನ್ನು ಶೇರ್ ಮಾಡಿದ್ದು, ಪ್ರೀತಿಯ ಪ್ರಜೆಗಳೆ, ಇದು ಭವಿಷ್ಯದ ಸಾಧ್ಯತೆ. ತನಾತನಿ ಸಂಸತ್ತು. ನಿಮಗಿದು ಒಪ್ಪಿಗೆಯೇ ಎಂದು ಕೇಳಿದ್ದಾರೆ. 

ಇದಕ್ಕೂ ಮುನ್ನಾ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ತುಣುಕನ್ನು ಹಂಚಿಕೊಳ್ಳುವ ಮೂಲಕ ನೀವು ಒಪ್ಪುತ್ತೀರಾ ಎಂದು ಪ್ರಶ್ನಿಸಿದ್ದರು.

ನಿನ್ನೆ ಅಂಬೇಡ್ಕರ್ ಮತ್ತು ಪೆರಿಯಾರ್ ಫೋಟೋಗಳನ್ನು ಶೇರ್ ಮಾಡುವುದರ ಜೊತೆಗೆ ಹಿಂದೂಗಳು ತನಾತನಿಸ್ ಅಲ್ಲ, ತನಾತನಿಸ್ ಮಾನವ ವಿರೋಧಿಗಳು ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.

 ಈ ಹಿಂದೆ ಚಂದ್ರಯಾನ-3 ಲೇವಡಿ ಮಾಡುವ ಮೂಲಕ ಅವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ, ಕಂಚಿನ ಪದಕಕ್ಕೆ ತೃಪ್ತಿ!

ನಾವು 'ಭಯೋತ್ಪಾದನೆಯ ಸಂತ್ರಸ್ತರು, ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ