ನಟ ಕಿಶೋರ್ 
ಸಿನಿಮಾ ಸುದ್ದಿ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?: ನಟ ಕಿಶೋರ್‌ ಕುಮಾರ್‌ ಪ್ರಶ್ನೆ

ಸನಾತನ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್‌ ಕುಮಾರ್‌ ಅವರು, ಇದಾವುದು ಹೊಸ ಧರ್ಮ ಸನಾತನ?...

ಬೆಂಗಳೂರು: ಸನಾತನ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್‌ ಕುಮಾರ್‌ ಅವರು, ಇದಾವುದು ಹೊಸ ಧರ್ಮ ಸನಾತನ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಕಿಶೋರ್ ಕುಮಾರ್ ಅವರು, ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ? ಸನಾತನ? ಎಂದು ಪ್ರಶ್ನಿಸಿದ್ದಾರೆ.

ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..

ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ, ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು, ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ...

ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..

ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ.

ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ, ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ. ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವ" ಎಂದು ಕಿಶೋರ್‌ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT