ಸಿನಿಮಾ ಸುದ್ದಿ

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!

Shilpa D

ಚಿಕ್ಕಮಗಳೂರು: ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಕಾರು ಬೈಕಿಗೆ ಗುದ್ದಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಾಲ್ತೇಶ್ ಎನ್ನಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

KA 51 MD 9552 ರಿಜಿಸ್ಟರ್ ಹೊಂದಿದ ಕಾರು ಮಾಲ್ತೇಶ್ ಅವರ ಸ್ಕೂಟರಿಗೆ ಗುದ್ದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಾಲತೇಶ್ ಸ್ಥಳದಲ್ಲಿ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಕಾರು ಕಾಮಿಡಿ ಕಿಲಾಡಿ ಶೋ ಚಂದ್ರಪ್ರಭ ಅವರಿಗೆ ಸೇರಿದ್ದು ಎನ್ನಲಾಗುತ್ತಿದೆ.

ಅಪಘಾತ ಸಂಭವಿಸಿ ಮಾಲತೇಶ್ ಗಂಭೀರ ಗಾಯಗೊಂಡರು, ಕಾರು ಚಾಲಕ ಸ್ಥಳದಲ್ಲಿ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿರುವ ಮಾಲ್ತೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆಯುವ ಸಂದರ್ಭದಲ್ಲಿ ಚಂದ್ರಪ್ರಭ ಅವರೇ ಕಾರು ಓಡಿಸುತ್ತಿದ್ದರೋ ಅಥವಾ ಬೇರೆಯವರು ಈ ಕಾರನ್ನು ತೆಗೆದುಕೊಂಡು ಹೋಗಿದ್ದರೋ ಎನ್ನುವ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

SCROLL FOR NEXT