ರಮ್ಯಾ 
ಸಿನಿಮಾ ಸುದ್ದಿ

ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು.

ಹೌದು, ನಟಿ ಹೃದಯ ಸ್ತಂಭನದಿಂದ ಸಾವಿಗೀಡಾಗಿದ್ದಾರೆ ಎನ್ನುವ ಪೋಸ್ಟ್‌ಗಳು ಬೆಳ್ಳಂಬೆಳಗ್ಗೆ ಟ್ವಿಟರ್‌ನಲ್ಲಿ ಹರಿದಾಡಿದ್ದು, ಭೀತಿ ಸಷ್ಟಿಸಿದ್ದವು.

ದಿವ್ಯ ಸ್ಪಂದನಾ ಸಾವಿನ ವದಂತಿಗಳು ಸುಳ್ಳು

ಕನ್ನಡದ ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಅವರ ನಿಧನದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಅವರು ಹೃದಯ ಸ್ತಂಭನದಿಂದಾಗಿ ಸಾವಿಗೀಡಾಗಿದ್ದಾರೆ ಎನ್ನುವಂತಹ ಪೋಸ್ಟ್‌ಗಳು ಹರಿದಾಡಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ. 

ಪತ್ರಕರ್ತೆ ಚಿತ್ರಾ ಸುಬ್ರಮಣ್ಯಂ ಇತ್ತೀಚೆಗೆ ಈ ಬಗ್ಗೆ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿದ್ದು, ನಟಿ ಯಾವ ಸಮಸ್ಯೆಯೂ ಇಲ್ಲದೆ ಆರಾಮಾಗಿದ್ದಾರೆ. ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದೆ ದಿವ್ಯ ಸ್ಪಂದನಾ ಚೆನ್ನಾಗಿದ್ದಾರೆ. ನಾಳೆ ಪ್ರೇಗ್ ನಗರಕ್ಕೆ ಮತ್ತು ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ  ಎಂದು ಎಂದು ದೃಢಪಡಿಸಿದ್ದಾರೆ.

ಅಲ್ಲದೆ, ರಮ್ಯಾ ಅವರು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಆರಾಮಾಗಿದ್ದಾರೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಮಾರುಕಟ್ಟೆ ವಿಶ್ಲೇಷಕ ಹಾಗೂ ಚಿತ್ರ ವಿಮರ್ಶಕ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ.

ನವೆಂಬರ್ 29, 1982ರಂದು ಜನಿಸಿದ ದಿವ್ಯ ಸ್ಪಂದನಾ ಅವರು ಕನ್ನಡ ಚಿತ್ರರಂಗದಲ್ಲಿ ರಮ್ಯಾ ಎಂದೇ ಚಿರಪರಿಚಿತ. ಇಂದಿಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಬಳಗವನ್ನು ಹೊಂದಿರುವ ನಟಿ, ರಾಜಕಾರಣಿಯೂ ಹೌದು. ಅವರು ಈ ಹಿಂದೆ ಮಂಡ್ಯ ಲೋಕಸಭೆಯನ್ನು ಪ್ರತಿನಿಧಿಸಿದ್ದರು. 

ರಮ್ಯಾ ಅವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದು, ತಮಿಳು ಚಿತ್ರರಂಗಕ್ಕೂ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಪ್ರತಿಭೆಗೆ ದಕ್ಷಿಣದ ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ಉದಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಸಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT