ಪುಷ್ಪ 2 ಪೋಸ್ಟರ್ 
ಸಿನಿಮಾ ಸುದ್ದಿ

ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಮುಂದಿನ ವರ್ಷ ಆಗಸ್ಟ್ 15 ರಂದು ಬಿಡುಗಡೆ

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ಮುಂದಿನ ವರ್ಷ ಆಗಸ್ಟ್ 15 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ.

ಹೈದರಾಬಾದ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ಮುಂದಿನ ವರ್ಷ ಆಗಸ್ಟ್ 15 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ.

ಚಿತ್ರ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಟ್ವೀಟ್ ಮೂಲಕ ಪುಷ್ಪ 2 ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

‘ದಿನಾಂಕವನ್ನು ಗುರುತು ಮಾಡಿಕೊಳ್ಳಿ. ವಿಶ್ವಾದ್ಯಂತ 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ. ಗಲ್ಲಾಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲು ಪುಷ್ಪರಾಜ್​ ಮತ್ತೆ ಬರುತ್ತಿದ್ದಾನೆ’ ಎಂಬ ಕ್ಯಾಪ್ಷನ್​ ಜೊತೆಗೆ ಹೊಸ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಸುಕುಮಾರ್ ನಿರ್ದೇಶನದ, ಪುಷ್ಪ 2: ದಿ ರೂಲ್ ಚಿತ್ರ ಮುಂದಿನ ವರ್ಷ ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಅಲ್ಲು ಅರ್ಜುನ್ ಸಹ ಟ್ವೀಟ್ ಮಾಡಿದ್ದಾರೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT