ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ಒಟಿಟಿ ಎಂಟ್ರಿಗೆ ದಿನಾಂಕ ಫಿಕ್ಸ್!

ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಜುಲೈ 21ರಂದು ಬಿಡುಗಡೆಯಾಯಿತು ಮತ್ತು ವಿಮರ್ಶಾತ್ಮಕ ಮೆಚ್ಚುಗೆ ಗಳಿಸಿದ ಚಿತ್ರವು ಇದೀಗ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. 

ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಜುಲೈ 21ರಂದು ಬಿಡುಗಡೆಯಾಯಿತು ಮತ್ತು ವಿಮರ್ಶಾತ್ಮಕ ಮೆಚ್ಚುಗೆ ಗಳಿಸಿದ ಚಿತ್ರವು ಕಮರ್ಷಿಯಲ್ ಆಗಿಯೂ ಯಶಸ್ಸು ಪಡೆಯಿತು. ತೆಲುಗು ಆವೃತ್ತಿಯಲ್ಲಿಯೂ ಬಿಡುಗಡೆಯಾದ ಚಿತ್ರ ಇದೀಗ ಸೆಪ್ಟೆಂಬರ್ 15 ರಂದು Zee5 ನಲ್ಲಿ ಬಿಡುಗಡೆಯಾಗಲಿದೆ.

ರಕ್ಷಿತ್ ಶೆಟ್ಟಿ ಅವರ ಪರವಃ ಸ್ಟುಡಿಯೋಸ್ ಪ್ರಸ್ತುತಪಡಿಸಿದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದಲ್ಲಿ ಪ್ರಜ್ವಲ್ ಬಿಪಿ, ಮಂಜುನಾಥ್ ನಾಯಕ, ರಾಕೇಶ್ ರಾಜಕುಮಾರ್, ಶ್ರೀವತ್ಸ ಮತ್ತು ತೇಜಸ್ ಜಯಣ್ಣ ಅರಸ್ ಸೇರಿದಂತೆ ಬಹುತೇಕ ಹೊಸ ಕಲಾವಿದರನ್ನು ಒಳಗೊಂಡಿದೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ, ನಿರ್ದೇಶಕ ಪವನ್ ಕುಮಾರ್ ಮತ್ತು ಶೈನ್ ಶೆಟ್ಟಿ ಅವರಂತ ನಟರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಸುಮಾರು 500 ರಂಗಭೂಮಿ ಕಲಾವಿದರನ್ನು ಬೆಳ್ಳಿತೆರೆಗೆ ಪರಿಚಯಿಸಿದೆ.

ನಿರ್ದೇಶಕ ನಿತಿನ್ ಕಷ್ಣಮೂರ್ತಿ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಅಲ್ಲದೆ, ವರುಣ್ ಗೌಡ, ಪ್ರಜ್ವಲ್ ಮತ್ತು ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರೊಂದಿಗೆ ಗುಲ್‌ಮೊಹರ್ ಫಿಲ್ಮ್ಸ್ ಮತ್ತು ವರನ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT