ಪನ್ನಗ ಸೋಮಶೇಖರ್ ನಿರ್ದೇಶನದ ಮುಂದಿನ ಸಿನಿಮಾದ ಟೈಟಲ್ ಅನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅನಾವರಣಗೊಳಿಸಿದರು. 
ಸಿನಿಮಾ ಸುದ್ದಿ

'ಕಡಲ ತೀರದ ಭಾರ್ಗವ' ನಿರ್ದೇಶಕರ 'ಕೆಂದಾವರೆ' ಸಿನಿಮಾಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸಾಥ್!​

'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.

'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ.

ಈ ಹಿಂದೆ ಮ್ಯೂಸಿಕ್ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದ ಆದಿತ್ಯ ವಿನೋದ್ ನಾಯಕ್ ಅವರು ಚಿತ್ರದಲ್ಲಿ ನಾಯಕನಾಗಿ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ. ನೈಜ ಘಟನೆಯನ್ನು ಆಧರಿಸಿದ ಚಿತ್ರವನ್ನು ಅಪ್ರಮೇಯ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಚಿತ್ರಕ್ಕೆ ಹಿತಾಂಶು ಸಂಗೀತ ನೀಡಿದರೆ, ಕೀರ್ತನ್ ಪೂಜಾರಿ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

ಸದ್ಯ ಪ್ರಿ-ಪ್ರೊಡಕ್ಷನ್‌ನಲ್ಲಿ ನಿರತರಾಗಿರುವ ಚಿತ್ರತಂಡ, ನವೆಂಬರ್‌ನಲ್ಲಿ ಹುಬ್ಬಳ್ಳಿ, ಕಾರವಾರ ಮತ್ತು ಸಾಗರದಂತಹ ಕರ್ನಾಟಕದ ಇತರ ಸ್ಥಳಗಳಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!