ಮಾಲಾಶ್ರೀ 
ಸಿನಿಮಾ ಸುದ್ದಿ

'ಮಾದೇವ' ಚಿತ್ರದ ಮೂಲಕ ಮತ್ತೆ ಆ್ಯಕ್ಷನ್‌ಗೆ ಮರಳಿದ ಮಾಲಾಶ್ರೀ!

ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳ ನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ  ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ.

ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ  ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ.

ವಿಭಿನ್ನ ಕಾಲಘಟ್ಟಗಳ (1965, 1980, ಮತ್ತು 1999) ಸ್ಪೂರ್ತಿದಾಯಕ ಕಥೆ ಎಂದು ವಿವರಿಸಲಾಗಿರುವ ಈ ಚಿತ್ರದಲ್ಲಿ ಮಾಲಾಶ್ರೀ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇದೀಗ ತಿಳಿದು ಬಂದಿದೆ. ಮಾಲಾಶ್ರೀ ಪಾತ್ರದ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸಿಲ್ಲ, ಆದರೆ ಅವರದ್ದು ಈ ಸಿನಿಮಾದಲ್ಲಿ ಆ್ಯಕ್ಷನ್ ಪಾತ್ರ ಎಂಬುದು ದೃಢಪಟ್ಟಿದೆ.

ವೈವಿಧ್ಯಮಯ  ಪಾತ್ರಗಳಿಂದಲೇ ಫೇಮಸ್ ಆಗಿದ್ದ ಮಾಲಾಶ್ರೀ ಆಕ್ಷನ್ ಪಾತ್ರಗಳಿಗೂ ಅಷ್ಟೇ ಪ್ರಸಿದ್ಧರಾಗಿದ್ದರು. ಮಾಲಾಶ್ರಿಗೆ ಸ್ಟಂಟ್‌ ಕೊರಿಯೋಗ್ರಫಿ ಮಾಡಿರುವ ಥ್ರಿಲ್ಲರ್ ಮಂಜು, ಚಿತ್ರದಲ್ಲಿನ ಅವರ ಸಾಹಸ ದೃಶ್ಯಗಳಿಂದ ಅವರ ಅಭಿಮಾನಿಗಳು ಥ್ರಿಲ್ ಆಗಲಿದ್ದಾರೆ ಎಂದು ಭರವಸೆ ನೀಡಿದ್ದಾರೆ. ಮಾಲಾಶ್ರೀ ಪಾತ್ರದ ಕುರಿತು ಹೆಚ್ಚಿನ ಮಾಹಿತಿಯು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ರಾಧಾಕೃಷ್ಣ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಆರ್ ಕೇಶವ ನಿರ್ಮಿಸಿರುವ ಮಾದೇವದಲ್ಲಿ ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂತೇರೊ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಈ ಜೋಡಿ ಮತ್ತೊಮ್ಮೆ ಒಂದಾಗುತ್ತಿದೆ. ಚಿತ್ರದಲ್ಲಿ ಶ್ರುತಿ, ಅಚ್ಯುತ್ ಕುಮಾರ್ ಮತ್ತು ಸುದ್ದಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಮಾದೇವ ಚಿತ್ರತಂಡ

ಚಿತ್ರವು ಕರ್ನಾಟಕ ಮತ್ತು ಹೈದರಾಬಾದ್‌ನ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಬಾಹುಬಲಿ ಡಿಒಪಿ ಸೆಂಥಿಲ್ ಕುಮಾರ್ ಅವರ ಮಾಜಿ ಸಹಾಯಕ ಬಾಲಕೃಷ್ಣ ತೋಟ ಅವರು ಛಾಯಾಗ್ರಹಣ ನಿರ್ವಹಿಸಿದ್ದಾರೆ.

ಪ್ರದ್ದ್ಯೋತ್ತನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಮಾದೇವ ಜೊತೆಗೆ, ವಿನೋದ್ ಪ್ರಭಾಕರ್ ಫೈಟರ್ ಬಿಡುಗಡೆಯನ್ನು ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ, ಇದು ಅಕ್ಟೋಬರ್‌ನಲ್ಲಿ ಥಿಯೇಟರ್‌ಗಳಲ್ಲಿ ಬರುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT