ಅಂದೊಂದಿತ್ತು ಕಾಲ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ವಿನಯ್ ರಾಜ್‌ಕುಮಾರ್ ನಟನೆಯ 'ಅಂದೊಂದಿತ್ತು ಕಾಲ' ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟ!

ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

'ಪೆಪೆ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವ ವಿನಯ್ ರಾಜ್‌ಕುಮಾರ್ ಅವರ ಮತ್ತೊಂದು ಕುತೂಹಲಕಾರಿ ಸಿನಿಮಾ 'ಅಂದೊಂದಿತ್ತು ಕಾಲ' ಕೂಡ ತೆರೆಗೆ ಬರಲು ಸಜ್ಜಾಗಿದೆ. ಕೀರ್ತಿ ಕುಚೇಲ ನಿರ್ದೇಶನದ ಮತ್ತು 90ರ ದಶಕದಲ್ಲಿ ನಡೆಯುವ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. 

ಇದು ಹೊಸ ಹುರುಪನ್ನು ತುಂಬುತ್ತದೆ ಎಂದಿರುವ ನಿರ್ದೇಶಕರು, ಚಿತ್ರದ ಕೆಲವು ಹೊಸ ಸ್ಟಿಲ್‌ಗಳನ್ನು ಸಹ ಇದೇ ವೇಳೆ ಹಂಚಿಕೊಂಡಿದ್ದಾರೆ.

ಚಿತ್ರಕ್ಕೆ ವಿ ರಾಘವೇಂದ್ರ ಅವರು ಸಂಗೀತ ಸಂಯೋಜಿಸಿದ್ದು, ಡಾ. ವಿ ನಾಗೇಂದ್ರ ಪ್ರಸಾದ್ ಮತ್ತು ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ. ಪ್ರತಿಭಾವಂತ ಗಾಯಕರು ಈ ಹಾಡುಗಳಿಗೆ ಜೀವ ತುಂಬಿದ್ದಾರೆ.

ಭುವನ್ ಮೂವೀಸ್ ಬ್ಯಾನರ್‌ ಅಡಿ ನಿರ್ಮಾಣವಾಗಿರುವ 'ಅಂದೊಂದಿತ್ತು ಕಾಲ' ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್‌ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಇದರೊಂದಿಗೆ ನಿಶಾ ಮಿಲನ, ಅರುಣಾ ಬಾಲರಾಜ್, ಕಡ್ಡಿಪುಡಿ ಚಂದ್ರು, ಜಗ್ಗಪ್ಪ ಮತ್ತು ಗೋವಿಂದೇಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈಮಧ್ಯೆ, ವಿನಯ್ ರಾಜ್‌ಕುಮಾರ್ ಅವರು 'ಗ್ರಾಮಾಯಣ' ಸಿನಿಮಾದ ಚಿತ್ರೀಕರಣವನ್ನು ಅಕ್ಟೋಬರ್ 4ರಂದು ಪ್ರಾರಂಭಿಸಲು ಯೋಜಿಸಿದ್ದಾರೆ. ಇದು ಗ್ರಾಮೀಣ ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಕಥೆಯನ್ನು ಹೊಂದಿದ್ದು, ಮೇಘಾ ಶೆಟ್ಟಿ ನಾಯಕಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ.ಜ. ಕೆಜೆಎಸ್ ಧಿಲ್ಲೋನ್

'ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

SCROLL FOR NEXT