ಜೆಜೆ ಪೆರ್ರಿ ಮತ್ತು ಯಶ್ 
ಸಿನಿಮಾ ಸುದ್ದಿ

ಯಶ್ 19 ಚಿತ್ರಕ್ಕೆ ರಾಖಿ ಭಾಯ್ ಸಿದ್ಧತೆ: ನವೆಂಬರ್ ನಲ್ಲಿ ಸೆಟ್ಟೇರಲಿದೆ ಸಿನಿಮಾ!

ಕೆಜಿಎಫ್​ 2 ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಹಿಟ್​ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್​ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು...

ಕೆಜಿಎಫ್​ 2 ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಹಿಟ್​ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್​ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು ಮುಂದಿಟ್ಟರೂ ಯಶ್ ಮಾತ್ರ ಯಾವುದೇ ಸಿನಿಮಾವನ್ನೂ ಅನೌನ್ಸ್ ಮಾಡಿಲ್ಲ.

ಕಳೆದ ಒಂದು ವರ್ಷದಿಂದ ಯಶ್​ 19 ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಲೇ ಇವೆ. ಇತ್ತೀಚೆಗಷ್ಟೇ ಗಣೇಶ ಚತುರ್ಥಿಗೆ ಯಶ್​ ಅವರು ತಮ್ಮ ಮುಂದಿನ ಸಿನಿಮಾವನ್ನು ಅನೌನ್ಸ್​ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದು ಕೂಡ ಕೇವಲ ಊಹಾಪೋಹವಾಗಿ ಉಳಿದುಕೊಂಡಿದೆ.

ಈ ಮಧ್ಯೆ ಯಶ್​ 19 ಬಗ್ಗೆ ಸೋಷಿಯಲ್​ ಮೀಡಿಯಾದಲ್ಲೊಂದು ವಿಚಾರ ಸದ್ದು ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ ದಾಸ್​ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

'ಲೈಯರ್ಸ್ ಡೈಸ್' ಚಿತ್ರಕ್ಕಾಗಿ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿರುವ ಗೀತು ಅವರ ಸ್ಕ್ರಿಪ್ಟ್​ಗೆ ಯಶ್​ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಚಿತ್ರ ಬಹುತೇಕ ಕನ್ಫರ್ಮ್​ ಆಗಿದೆ ಎಂಬುದು ಸದ್ಯದ ಮಾಹಿತಿ.​ ಚಿತ್ರದ ಕುರಿತು ಯಶ್ ಹಾಗೂ ಅವರ ತಂಡ ತೆರೆಮರೆಯಲ್ಲಿ ಕೆಲಸ ಮಾಡುತ್ತಿದೆ್ದು, ಬಹುಭಾಷೆಯಲ್ಲಿ ಈ ಚಿತ್ರ ತೆರೆಕಾಣಲಿದೆ ಎನ್ನಲಾಗುತ್ತಿದೆ.

ಪ್ರಸ್ತುತ ಯಶ್ ಹಾಗೂ ಅವರ ತಂಡ ಲಂಡನ್ ನಲ್ಲಿದ್ದು, ಹಾಲಿವುಡ್‌ನ ಖ್ಯಾತ ಸಾಹಸ ನಿರ್ದೇಶಕ ಹಾಗೂ ಮಾರ್ಷಲ್ ಆರ್ಟಿಸ್ಟ್ ಮತ್ತು ಹಾಲಿವುಡ್ ಆಕ್ಷನ್ ಸಿನಿಮಾಗಳ ನಿರ್ದೇಶಕ ಜೆಜೆ ಪೆರ್ರಿ ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ಚಿತ್ರವನ್ನು ಸ್ವತಃ ಜೆಜೆ ಪೆರ್ರಿ ಅವರೇ ತನ್ನ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘ಸಹೋದರನ ಜೊತೆ ಲಂಡನ್‌ನಲ್ಲಿ’ ಎಂದು ಬರೆದುಕೊಂಡಿದ್ದಾರೆ.

ಲಂಡನ್ ಅಷ್ಟೇ ಅಲ್ಲದೆ ಯಶ್ ಪ್ರಿ-ಪ್ರೊಡಕ್ಷನ್ ಗಾಗಿ ಶ್ರಿಲಂಕಾಗೂ ಭೇಟಿ ನೀಡಿದ್ದಾರೆ. ಚಿತ್ರದ ಚಿತ್ರೀಕರಣ ನವೆಂಬರ್ ನಲ್ಲಿ ಪ್ರಾರಂಭವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ