ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸ್ಟಿಲ್ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯ

ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಹೇಮಂತ್ ಎಂ ರಾವ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಅವಿನಾಶ್, ಚೈತ್ರ ಜೆ ಆಚಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. ಗುಂಡು ಶೆಟ್ಟಿ ಜೊತೆಗೆ ಹೇಮಂತ್ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತು ಮತ್ತು ವ್ಯಾಪಕ ಮೆಚ್ಚುಗೆ ಪಡೆಯಿತು. 
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗಬಹುದು ಎಂಬ ಕುತೂಹಲ ಎದುರಾಗಿತ್ತು. ಆದರೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್‌ ಬಿ ರಿಲೀಸ್‌ ನಂತರವೇ ಎರಡೂ ಸಿನಿಮಾಗಳು ಒಟ್ಟಿಗೆ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಬಹುದು ಎನ್ನಲಾಗಿತ್ತು. ಆದರೆ, ಇದೀಗ ನಿನ್ನೆ ರಾತ್ರಿಯಿಂದಲೇ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಪ್ರೈಂ ವಿಡೋಯದಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಒಟಿಟಿಯಲ್ಲಿ ಲಭ್ಯವಿದೆ.

ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ ಚಿತ್ರವು ಸೆಪ್ಟೆಂಬರ್ 22 ರಂದು ತೆಲುಗಿನಲ್ಲಿ 'ಸಪ್ತ ಸಾಗರಾಲು ದಾಟಿ' ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಯಾಯಿತು.

ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ನಟಿ ಸಮಂತಾ ರುತ್ ಪ್ರಭು ಕೂಡ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದು, ನಟಿ ರುಕ್ಮಿಣಿ ವಸಂತ್ ನಟನೆಗೆ ಫುಲ್ ಮಾರ್ಕ್ಸ್ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT