ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಆರೋಗ್ಯದಲ್ಲಿ ಏರುಪೇರು: ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಶಿವಣ್ಣ ಭಾನುವಾರ ದೇವನಹಳ್ಳಿ ಬಳಿ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಶೂಟಿಂಗ್ ಸಂದರ್ಭದಲ್ಲಿ ಸುಸ್ತು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ತೆರಳಿದ್ದಾರೆ. ಸೆಟ್ ನಲ್ಲಿನ ಧೂಳಿನ ಸಮಸ್ಯೆಯಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗಿದ್ದು, ಒಂದು ದಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚನೆ ನೀಡಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ ಗಂಭೀರ ರೀತಿಯ ಅನಾರೋಗ್ಯ ಸಮಸ್ಯೆ ಎದುರಾಗಿಲ್ಲ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ