ರಚಿತಾ ರಾಮ್ - VK-29 ಪೋಸ್ಟರ್ - ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ಆಕ್ಷನ್-ಪ್ಯಾಕ್ಡ್ ಸಿನಿಮಾ ಇದಾಗಿದ್ದು, ಫ್ಯಾಮಿಲಿ ಎಂಟರ್‌ಟೈನರ್ ಎಂದು ಹೇಳಲಾಗಿದೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸದ್ಯ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣದಲ್ಲಿರುವ ನಟಿಯೊಂದಿಗೆ ಚರ್ಚೆಗಳು ನಡೆಯುತ್ತಿವೆ. ರಚಿತಾ ರಾಮ್ ಅವರು ಪ್ರೀತಂ ಗುಬ್ಬಿ ನಿರ್ದೇಶನದ 'ಜಾನಿ ಜಾನಿ ಯೆಸ್ ಪಾಪ' (2018) ನಲ್ಲಿ ವಿಜಯ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದರು. ಇದೀಗ ಎಲ್ಲವೂ ಅಂದುಕೊಂಡಂತೆ ಆದರೆ, ವಿಜಯ್ ಮತ್ತು ರಚಿತಾ ಜೋಡಿ ಎರಡನೇ ಬಾರಿಗೆ ಮೋಡಿ ಮಾಡಲು ಮುಂದಾಗಲಿದೆ.

ತಾತ್ಕಾಲಿಕವಾಗಿ 'VK-29' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಕುತೂಹಲಕಾರಿ ಪೋಸ್ಟರ್‌ನೊಂದಿಗೆ ಅಧಿಕೃತವಾಗಿ ಚಿತ್ರವನ್ನು ಘೋಷಿಸಲಾಗಿದೆ. ಸಾರಥಿ ನಿರ್ಮಾಪಕ ಕೆವಿ ಸತ್ಯ ಪ್ರಕಾಶ್ ಅವರು ಈ ಚಿತ್ರದ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಅವರು ತಮ್ಮ ಮಗ ಸೂರಜ್ ಜೊತೆಗೆ ಈ ಯೋಜನೆಗೆ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಚಿತ್ರದ ಮುಹೂರ್ತಕ್ಕೆ ಚಿತ್ರತಂಡ ಸಜ್ಜಾಗಿದ್ದು, ಸದ್ಯದಲ್ಲೇ ನಡೆಯುವ ನಿರೀಕ್ಷೆ ಇದೆ.

ನಟಿ ರಚಿತಾ ರಾಮ್ ಚಿತ್ರತಂಡ ಸೇರಿರುವ ಕುರಿತು ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ನಿರೀಕ್ಷಿಸಲಾಗಿದೆ. 'VK-29' ಚಿತ್ರದಲ್ಲಿ ಮೂಲಕ ದುನಿಯಾ ವಿಜಯ್ ಅವರ ಮೋನಿಕಾ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್‌ಗೆ ಮೋನಿಕಾ ಎಂಟ್ರಿ ಕೊಡಲಿದ್ದಾರೆ. ಚಿತ್ರದ ತಾರಾಗಣ ಮತ್ತು ತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ