ನಟ ಸಯಾಜಿ ಶಿಂಧೆ 
ಸಿನಿಮಾ ಸುದ್ದಿ

ದಕ್ಷಿಣ ಭಾರತದ ಖ್ಯಾತ ನಟ Sayaji Shindeಗೆ ತೀವ್ರ ಎದೆನೋವು, ಆಸ್ಪತ್ರೆಗೆ ದಾಖಲು; ತುರ್ತು ಶಸ್ತ್ರಚಿಕಿತ್ಸೆ!

ದಕ್ಷಿಣ ಭಾರತದ ಖ್ಯಾತ ನಟ ಸಯಾಜಿ ಶಿಂಧೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟ ಸಯಾಜಿ ಶಿಂಧೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ನಟ ಸಯಾಜಿ ಶಿಂಧೆ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 11 ರಂದು ಸತಾರಾದಲ್ಲಿರುವ ಪ್ರತಿಭಾ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ಮೂಲಗಳು ತಿಳಿಸಿರುವಂತೆ ಅವರ ಹೃದಯನಾಳಗಳಲ್ಲಿ ಬ್ಲಾಕೇಜ್ ಕಂಡುಬಂದಿತ್ತು. ಹೀಗಾಗಿ ವೈದ್ಯರು ಅವರಿಗೆ ತುರ್ತು ಆ್ಯಂಜಿಯೋಪ್ಲಾಸ್ಟಿ (Emergency Angioplasty) ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ನಟ ಶಿಂಧೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಸಯಾಜಿ ಶಿಂಧೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಮಾಡಿರುವ ನಟ

ಇನ್ನು ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಶಿಂಧೆ“ಹಾಯ್, ನಾನು ಚೆನ್ನಾಗಿದ್ದೇನೆ. ನನ್ನನ್ನು ಪ್ರೀತಿಸುವ ಎಲ್ಲ ಅಭಿಮಾನಿಗಳಿಗೆ, ನನ್ನೊಂದಿಗಿರುವ ಹಿತೈಷಿಗಳಿಗೆ ಹೇಳುವುದೇನೆಂದರೆ, ನೀವು ಆತಂಕ ಪಡುವ ಅಗತ್ಯವಿಲ್ಲ., ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ಅಂದಹಾಗೆ ನಟ ಶಿಂಧೆ, ತಮಿಳು, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ, ಮರಾಠಿ ಮತ್ತು ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಹೆಚ್ಚಾಗಿ ಖಳ ನಾಯಕನ ಪಾತ್ರವನ್ನೇ ನಿಭಾಯಿಸುತ್ತಿದ್ದರು. ಕನ್ನಡದ ವೀರಕನ್ನಡಿಗ ಚಿತ್ರದಲ್ಲಿ ಶಿಂಧೆ ಖಳನಟನಾಗಿ ಕಾಣಿಸಿಕೊಂಡಿದ್ದರು. ತೆಲುಗಿನ ಮಹೇಶ್ ಬಾಬು ನಟನೆಯ ಪೋಕಿರಿ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT