ಕಿಯಾರಾ ಅಡ್ವಾಣಿ - ಯಶ್ 
ಸಿನಿಮಾ ಸುದ್ದಿ

ಟಾಕ್ಸಿಕ್ ಚಿತ್ರದಿಂದ ಕರೀನಾ ಕಪೂರ್ ಔಟ್; ಯಶ್‌ಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಜೋಡಿ!

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಈ ತಿಂಗಳು ಶೂಟಿಂಗ್ ಪ್ರಾರಂಭಿಸಲು ಸಜ್ಜಾಗಿದೆ. ಚಿತ್ರದ ತಾರಾಗಣದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಬಾಲಿವುಡ್ ನಟಿಯೊಬ್ಬರು ಇದೀಗ ಯಶ್‌ಗೆ ಜೋಡಿಯಾಗಲಿದ್ದಾರೆ ಎನ್ನಲಾಗಿದೆ.

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಈ ತಿಂಗಳು ಶೂಟಿಂಗ್ ಪ್ರಾರಂಭಿಸಲು ಸಜ್ಜಾಗಿದೆ. ಚಿತ್ರದ ತಾರಾಗಣದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಬಾಲಿವುಡ್ ನಟಿಯೊಬ್ಬರು ಇದೀಗ ಯಶ್‌ಗೆ ಜೋಡಿಯಾಗಲಿದ್ದಾರೆ ಎನ್ನಲಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ, ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರವು ಈಗಾಗಲೇ ಪ್ರೇಕ್ಷಕರಲ್ಲಿ ತೀವ್ರ ನಿರೀಕ್ಷೆ ಹುಟ್ಟುಹಾಕಿದೆ. ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತು ಹಿಂದಿ ನಟ ನವಾಜುದ್ದೀನ್ ಸಿದ್ದಿಕ್ ಕೂಡ ಚಿತ್ರದ ಭಾಗವಾಗಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿಯೆಂದರೆ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಯಶ್ ಜೊತೆಗೆ ಟಾಕ್ಸಿಕ್ ಚಿತ್ರದಲ್ಲಿ ನಟಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ಚಿತ್ರವು ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಹಿಂದಿ ಮತ್ತು ತೆಲುಗು ಚಿತ್ರಗಳಲ್ಲಿ ಕೆಲಸ ಮಾಡಿರುವ ಕಿಯಾರಾಗೆ ಇದು ಚೊಚ್ಚಲ ಕನ್ನಡ ಚಿತ್ರವಾಗಲಿದೆ. ಹಿಂದಿ ಚಿತ್ರರಂಗದ ಬಹುತೇಕ ನಟ-ನಟಿಯರು ಈಗಾಗಲೇ ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದು, ಕನ್ನಡ ಸಿನಿಮಾಗಳ ಜನಪ್ರಿಯತೆಯಿಂದಾಗಿ ಸ್ಯಾಂಡಲ್‌ವುಡ್‌ ಚಿತ್ರಗಳಲ್ಲಿ ನಟಿಸಲೂ ಕೂಡ ನಟ-ನಟಿಯರು ಮುಂದಾಗುತ್ತಿದ್ದಾರೆ.

ಈ ಹಿಂದೆ ಬಾಲಿವುಡ್ ನಟಿ ಕರೀನಾ ಕಪೂರ್ ಅವರು ಟಾಕ್ಸಿಕ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವದಂತಿಗಳು ಕೇಳಿಬಂದಿದ್ದವು. ಆದರೆ, ಡೇಟ್ ಹೊಂದಾಣಿಕೆಯ ಸಮಸ್ಯೆಯಿಂದಾಗಿ ಅವರು ಚಿತ್ರವನ್ನು ತೊರೆದಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿದೆ. ಇತ್ತೀಚೆಗಷ್ಟೇ ಕ್ರೂ ಚಿತ್ರದಲ್ಲಿ ನಟಿಸಿದ್ದ ನಟಿ, ಸದ್ಯ ಸಿಂಗಂ ಅಗೇನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಇತರ ಪಾತ್ರವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಧಿಕೃತ ಘೋಷಣೆ ಮಾಡಲು ಯೋಜಿಸಿದೆ. ಟಾಕ್ಸಿಕ್ ಚಿತ್ರಕ್ಕೆ ಜೆರೆಮಿ ಸ್ಟಾಕ್ ಸಂಗೀತ ಮತ್ತು ರಾಜೀವ್ ರವಿ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT