ಸಿನಿಮಾ ಸುದ್ದಿ

ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಹೊಸ ಚಿತ್ರದಲ್ಲಿ ಪೃಥ್ವಿ ಅಂಬಾರ್

ಶ್ರೀಮುರಳಿ ಅಭಿನಯದ ರಥಾವರ ಚಿತ್ರದ ಮೂಲಕ ಖ್ಯಾತಿ ಪಡೆದ ಆನೆ ಪಟಾಕಿ ಮತ್ತು ತಾರಕಾಸುರ ಚಿತ್ರಗಳ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಇದೀಗ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಅವರ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್‌ಪ್ರೈಸಸ್ ಬ್ಯಾನರ್‌ ಅಡಿಯಲ್ಲಿ ಶಿಕ್ಷಣ ತಜ್ಞ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಿಸಲಿದ್ದಾರೆ.

ಶ್ರೀಮುರಳಿ ಅಭಿನಯದ ರಥಾವರ ಚಿತ್ರದ ಮೂಲಕ ಖ್ಯಾತಿ ಪಡೆದ ಆನೆ ಪಟಾಕಿ ಮತ್ತು ತಾರಕಾಸುರ ಚಿತ್ರಗಳ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಇದೀಗ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಅವರ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

'ನಾನು ನನ್ನ ಮೊದಲ ಹಿಂದಿ ಚಿತ್ರವಾದ ಕಿಶೋರ್ ಅಭಿನಯದ 'ರೆಡ್ ಕಾಲರ್' ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇನೆ. ಅದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಗುರುದತ್ತ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೆ ಬರಹಗಾರನಾಗಿ ಕೆಲಸ ಮಾಡಿರುವ ನಾನು ನನ್ನ ಮುಂದಿನ ಯೋಜನೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದೇನೆ' ಎಂದು ನಿರ್ದೇಶಕರು ಹೇಳುತ್ತಾರೆ.

ವಿಶೇಷವಾಗಿ ಕ್ಲಾಸಿಕ್ ಕಂಟೆಂಟ್‌ಗಳ ಮೂಲಕ ಹೆಸರುವಾಸಿಯಾಗಿರುವ ಚಂದ್ರಶೇಖರ್ ಇದೀಗ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾ ನಿರ್ದೇಶನದತ್ತ ಹೊರಳಿದ್ದಾರೆ. ಈ ಚಿತ್ರಕಥೆಯಲ್ಲಿ ಬದಲಾವಣೆಯನ್ನು ತಂದಿರುವುದಾಗಿ ಅವರು ಹೇಳುತ್ತಾರೆ. 'ಈಗಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಕಂಟೆಂಟ್ ಅನ್ನು ವಿಶೇಷವಾಗಿ ರಚಿಸಲಾಗಿದೆ ಮತ್ತು ಪೃಥ್ವಿ ಅಂಬಾರ್ ಈ ಕಥೆಗೆ ಉತ್ತಮವಾಗಿ ಹೊಂದಿಕೊಳ್ಳುತ್ತಾರೆ' ಎನ್ನುತ್ತಾರೆ.

ಇನ್ನೂ ಹೆಸರಿಡದ ಈ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್‌ಪ್ರೈಸಸ್ ಬ್ಯಾನರ್‌ ಅಡಿಯಲ್ಲಿ ಶಿಕ್ಷಣ ತಜ್ಞ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಿಸಲಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ಸಂಯೋಜಿಸಲಿದ್ದು, ಚಿತ್ರದ ಉಳಿದ ತಾರಾಗಣ ಮತ್ತು ತಂತ್ರಜ್ಞರನ್ನು ಅಂತಿಮಗೊಳಿಸಲಾಗುತ್ತಿದೆ.

ಈಮಧ್ಯೆ, ಮತ್ಸ್ಯಗಂಧ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪೃಥ್ವಿ ಅಂಬಾರ್ ಅವರ ನಟನೆಯ 'ಭುವನಂ ಗಗನಂ' ಮತ್ತು 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಗಳು ಸದ್ಯ ಪೋಸ್ಟ್ ಪ್ರೊಡಕ್ಷನ್‌ ಹಂತದಲ್ಲಿವೆ. ಮಜೈ ಪುಡಿಕಥಾ ಮಾನಿತನ್ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೂ ನಟ ಪದಾರ್ಪಣೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ