ದ್ವಾರಕೀಶ್  
ಸಿನಿಮಾ ಸುದ್ದಿ

ನಟ ದ್ವಾರಕೀಶ ವಿಧಿವಶ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.

ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

SCROLL FOR NEXT