ದ್ವಾರಕೀಶ್  
ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.

1942, ಆಗಸ್ಟ್ 19 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದರು.

ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು, ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.

ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಪ್ರಚಂಡಕುಳ್ಳ ಎಂದೇ ಜನಪ್ರಿಯರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!