ತೇಜೇಶ್ ಬಿಕೆ - ನೆನಪಿರಲಿ ಪ್ರೇಮ್ 
ಸಿನಿಮಾ ಸುದ್ದಿ

ತೇಜೇಶ್ ಬಿಕೆ ಚೊಚ್ಚಲ ನಿರ್ದೇಶನದ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಪೊಲೀಸ್ ಅಧಿಕಾರಿ ಪಾತ್ರ

ಬಹುತೇಕ ರೊಮ್ಯಾಂಟಿಕ್ ಸಿನಿಮಾಗಳಲ್ಲಿಯೇ ನಟಿಸಿರುವ ನಟ ನೆನಪಿರಲಿ ಪ್ರೇಮ್ ಇದೀಗ ಪೊಲೀಸ್ ಅಧಿಕಾರಿಯಾಗಿ ತೆರೆ ಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಪ್ರೇಮ್ ಇದೀಗ ಖಾಕಿ ಸಮವಸ್ತ್ರ ಧರಿಸಿ, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಗುರುವಾರ ಪ್ರೇಮ್ ಅವರ ಹುಟ್ಟುಹಬ್ಬದಂದು ಅಧಿಕೃತ ಪ್ರಕಟಣೆ ಮಾಡಲಾಗಿದೆ.

ಬಹುತೇಕ ರೊಮ್ಯಾಂಟಿಕ್ ಸಿನಿಮಾಗಳಲ್ಲಿಯೇ ನಟಿಸಿರುವ ನಟ ನೆನಪಿರಲಿ ಪ್ರೇಮ್ ಇದೀಗ ಪೊಲೀಸ್ ಅಧಿಕಾರಿಯಾಗಿ ತೆರೆ ಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಪ್ರೇಮ್ ಇದೀಗ ಖಾಕಿ ಸಮವಸ್ತ್ರ ಧರಿಸಿ, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಗುರುವಾರ ಪ್ರೇಮ್ ಅವರ ಹುಟ್ಟುಹಬ್ಬದಂದು ಅಧಿಕೃತ ಪ್ರಕಟಣೆ ಮಾಡಲಾಗಿದೆ. ಇದು ನಟನ 28ನೇ ಸಿನಿಮಾ ಆಗಿದ್ದು, ಗನ್ ಒಳಗೊಂಡಿರುವ 'Be in Peace or He'll pierce-- Rebranding Prem 2.0' ಎಂದು ನಮೂದಿಸಿರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಗಳನ್ನು ಚಿತ್ರತಂಡ ಬಹಿರಂಗಪಡಿಸಲಿದೆ.

ಈ ಚಿತ್ರವನ್ನು ತೇಜೇಶ್ ಬಿಕೆ ನಿರ್ದೇಶಿಸಲಿದ್ದು, ಇದೇ ಮೊದಲ ಬಾರಿಗೆ ಅವರು ನಿರ್ದೇಶಕನ ಕ್ಯಾಪ್ ತೊಡುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ನಿರ್ದೇಶಕನ ತರಬೇತಿ ಪಡೆದ ನಂತರ, ಜಾಹೀರಾತು ನಿರ್ದೇಶನದೊಂದಿಗೆ ಅನುಭವ ಗಳಿಸಿದ್ದಾರೆ. ಇದೀಗ ಕ್ರೈಮ್ ಸಸ್ಪೆನ್ಸ್ ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಪ್ರೇಮ್ ಜೊತೆಗೆ ಪ್ರಮುಖ ಪಾತ್ರದಲ್ಲಿ ನಟ ರಂಗಾಯಣ ರಘು ಕಾಣಿಸಿಕೊಳ್ಳಲಿದ್ದಾರೆ. Pentrix Entertainments ಬ್ಯಾನರ್ ಅಡಿಯಲ್ಲಿ ಗೀತಾಂಜಲಿ ನಿರ್ಮಿಸಲಿರುವ ಈ ಚಿತ್ರಕ್ಕೆ ತಾತ್ಕಾಲಿಕವಾಗಿ PK 28 ಎಂಬ ಶೀರ್ಷಿಕೆಯನ್ನು ಇಡಲಾಗಿದೆ. ಶೀಘ್ರದಲ್ಲೇ ನಾಯಕಿ ಮತ್ತು ಉಳಿದ ಪಾತ್ರವರ್ಗವನ್ನು ಚಿತ್ರತಂಡ ಅಂತಿಮಗೊಳಿಸಲಿದೆ.

ವಾಸುಕಿ ವೈಭವ್, ಆನಂದ್ ಮೀನಾಕ್ಷಿ ಮತ್ತು ಹರೀಶ್ ಕೊಮ್ಮೆ ಅವರು ಕ್ರಮವಾಗಿ ಸಂಗೀತ ನಿರ್ದೇಶಕ, ಛಾಯಾಗ್ರಾಹಕ ಮತ್ತು ಸಂಕಲನಕಾರರಾಗಿ ಈ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ. ಏಪ್ರಿಲ್ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT