ರಮೇಶ್ ಅರವಿಂದ್ 
ಸಿನಿಮಾ ಸುದ್ದಿ

ಶ್ರಮಿಕ ವರ್ಗಕ್ಕೆ ಅವಮಾನ: ನಟ ರಮೇಶ್ ಅರವಿಂದ್, ನಿರೂಪಕಿ ಅನುಶ್ರೀ ಸೇರಿ ಹಲವರ ವಿರುದ್ಧ ದೂರು ದಾಖಲು

ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರ ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಸ್ಪರ್ಧಿ, ನಿರೂಪಕಿ ಅನುಶ್ರೀ ಹಾಗೂ ಇತರರ ವಿರುದ್ಧ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿಗೆ ಆರಂಭವಾದ ಈ ರಿಯಾಲಿಟಿ ಶೋ ತನ್ನ ವಿಶೇಷತೆಗಳಿಂದ ಪ್ರೇಕ್ಷಕರ ಮನಗೆದ್ದಿದ್ದು, ಟಿಆರ್‌ಪಿಯಲ್ಲೂ ಉತ್ತಮ ಸ್ಥಾನ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವೀಕೆಂಡ್‌ನಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಈ ಬಾರಿ ಫ್ಯಾಮಿಲಿ ರೌಂಡ್‌ ಆಯೋಜನೆ ಮಾಡಲಾಗಿತ್ತು. ಸ್ಪರ್ಧಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ನಟಿಸಬೇಕಿತ್ತು. ಈ ವಾರಾಂತ್ಯ ಪ್ರಸಾರವಾದ ಈ ಸಂಚಿಕೆ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಆದರೆ ಸ್ಪರ್ಧಿಯೊಬ್ಬರು ಬಳಸಿದ ಒಂದು ಪದದಿಂದ ಶ್ರಮಿಕರಿಗೆ ನೋವಾಗಿದೆ. ಈ ರಿಯಾಲಿಟಿ ಶೋ ಸ್ಪರ್ಧಿ ಗಗನ ದೃಶ್ಯವೊಂದರ ನಟನೆಯಲ್ಲಿ ‘ಮ್ಯಾಕನಿಕ್‌ನನ್ನು ಮದುವೆಯಾದರೆ ಗ್ರೀಸ್ ತಿಂದುಕೊಂಡು ಬದುಕಲಾಗದು...’ ಎಂಬ ಮಾತುಗಳನ್ನು ಆಡುತ್ತಾಳೆ. ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ. ಶ್ರಮಿಕವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮತ್ತು ನಿಂದನಾತ್ಮಕ ಮಾತುಗಳನ್ನು ಆಡಿರುವ ಸ್ಪರ್ಧಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡಿದ ನಿರೂಪಕಿ, ನಿರ್ದೇಶಕರು, ನಿರ್ಮಾಪಕರು, ತೀರ್ಪುಗಾರರು ಹಾಗೂ ವಾಹಿನಿಯ ವಿರುದ್ಧ ರಾಜ್ಯದ ಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದೂರು ದಾಖಲಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಉಂಟುಮಾಡುವ, ಸಮುದಾಯಗಳ ನಡುವೆ ದ್ವೇಷಭಾವನೆ ಬಿತ್ತುವ ಹಾಗೂ ಶ್ರಮಿಕರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಪಟ್ಟಣದ ಠಾಣೆಯ ಮೂಲಕ ದೂರು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT