ಧರ್ಮಸ್ಥಳದಲ್ಲಿ ನಟ ಯಶ್ ಕುಟುಂಬ 
ಸಿನಿಮಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು.

ಬೆಳ್ತಂಗಡಿ: ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು. ಸಿನೆಮಾದ ಸಕ್ಸಸ್ ಗಾಗಿ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಡಾ.ಸತೀಶ್ಚಂದ್ರ ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು. ಯಶ್ ಜೊತೆ ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಇದ್ದರು. ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್ ಜೊತೆಗಿದ್ದರು.

ಬಳಿಕ ದಂಪತಿಗಳು ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳಿದ್ದು, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!