ಕಾಂತಾರಾ, ಕೆಜಿಎಫ್-2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

70th National Film Awards: ರಿಷಭ್ ಶೆಟ್ಟಿ ಅತ್ಯುತ್ತಮ ನಟ; KGF-2 ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ

ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ.

ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ 'ಕಾಂತಾರ' ಪ್ರಶಸ್ತಿ ಬಾಚಿಕೊಂಡಿದೆ.

2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.

ಜನವರಿ 1, 2022 ರಿಂದ ಡಿಸೆಂಬರ್ 31,2022ರ ಸಾಲಿನಲ್ಲಿ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸಿ ಇದೀಗ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. 2023ರ ಮೇ ತಿಂಗಳಲ್ಲಿ ಈ ಪ್ರಶಸ್ತಿಗಳ ಘೋಷಣೆಯಾಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಪ್ರಶಸ್ತಿ ಘೋಷಣೆ ವಿಳಂಭವಾಗಿತ್ತು.

ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ.

ರಾಷ್ಟ್ರೀಯ ಪ್ರಶಸ್ತಿ ಪಡೆದ ಇತರ ಚಿತ್ರಗಳು: ಗಣ್ಯರು

ಅತ್ಯುತ್ತಮ ಚಲನಚಿತ್ರ ಅಟ್ಟಂ (ಮಲಯಾಳಂ)

ಅತ್ಯುತ್ತಮ ನಿರ್ದೇಶಕ, ಸೂರಜ್ ಬರ್ಜಾತ್ಯ( ಉಂಚಾಯಿ ಚಿತ್ರ)

ಅತ್ಯುಮತ್ತ ನಟಿ- ನಿತ್ಯಾಮೆನನ್

ಅತ್ಯುತ್ತಮ ಸಹಾಯಕ ನಟಿ- ನೀನಾ ಗುಪ್ತ

ಅತ್ಯುತ್ತಮ ಸಹಾಯಕ ನಟ- ಪವನ ರಾಜ್

ಅತ್ಯುತ್ತಮ ಸಿನಿಮಾ AVGC, ಬ್ರಹಾಸ್ತ್ರ (ಹಿಂದಿ)

ಅತ್ಯುತ್ತಮ ಫೀಚರ್ ಫಿಲ್ಮ್: ಕಚ್ ಎಕ್ಸ್‌ಪ್ರೆಸ್(ಗುಜರಾತಿ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT