ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶದ 'ಇಬ್ಬನಿ ತಬ್ಬಿದ ಇಳೆಯಲಿ' ರಿಲೀಸ್ ಡೇಟ್ ಫಿಕ್ಸ್!

ವಿಹಾನ್‌ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್‌ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ.

ರಕ್ಷಿತ್ ಶೆಟ್ಟಿ ಪರಮಾವ್ ಸ್ಟುಡಿಯೋಸ್ ನಿರ್ಮಾಣದ, ಚಂದ್ರಜಿತ್ ಬೆಳ್ಳಿಯಪ್ಪ ಚೊಚ್ಚಲ ನಿರ್ದೇಶನದ, ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಅಭಿನಯದ ರೊಮ್ಯಾಂಟಿಕ್ ಚಿತ್ರವು ಸೆಪ್ಟೆಂಬರ್ 5 ರಂದು ಗೌರಿ ಮತ್ತು ಗಣೇಶ ಹಬ್ಬದಂದು ಥಿಯೇಟರ್‌ಗೆ ಬರಲಿದೆ.

ಪೋಸ್ಟರ್​ ಹಂಚಿಕೊಂಡ ನಿರ್ಮಾಪಕ ರಕ್ಷಿತ್​​ ಶೆಟ್ಟಿ, ಇದು ಯಾವುದೇ ಸುಂದರ, ಮ್ಯಾಜಿಕ್​​ ಕನಸಿಗೆ ಕಡಿಮೆಯಿಲ್ಲ. ಇಬ್ಬನಿ ತಬ್ಬಿದ ಇಳೆಯಲಿ ಟ್ರೇಲರ್​ ಆಗಸ್ಟ್​ 22ಕ್ಕೆ ಬಿಡುಗಡೆ ಆಗಲಿದೆ ಎಂದು ಬರೆದುಕೊಂಡಿದ್ದಾರೆ. ಚಿತ್ರವು ಈಗಾಗಲೇ ಮೂರು ರೊಮ್ಯಾಂಟಿಕ್ ಹಾಡುಗಳನ್ನು ರಿಲೀಸ್ ಮಾಡಲಾಗಿದೆ. ಕಿರಿಕ್‌ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್‌ ಬೆಳಿಯಪ್ಪ, ರಕ್ಷಿತ್‌ ಅವರ ಸೆವೆನ್‌ ಓಡ್ಸ್‌ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾ ಸಂಗಮ ಚಿತ್ರದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಈಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪ್ರಸ್ತುತ ಈ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಬಿರುಸಿನಿಂದ ಸಾಗಿದೆ.

ವಿಹಾನ್‌ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್‌ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್‌ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕಾಪು ಅವರ ಸಂಕಲನವಿರುವ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ