ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ 
ಸಿನಿಮಾ ಸುದ್ದಿ

ಅನುರಾಗ್ ಕಶ್ಯಪ್ ಅವರಿಗಾಗಿ ಬಾಲಿವುಡ್ ಸಿನಿಮಾ ಒಪ್ಪಿಕೊಂಡೆ: ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ

ಈ ಹಿಂದೆ ರಾಜ್‌ ಬಿ ಶೆಟ್ಟಿ ನಿರ್ದೇಶಿಸಿದ್ದ ಗರುಡ ಗಮನ ವೃಷಭ ವಾಹನ ಸಿನೆಮಾಗೆ ಅನುರಾಗ್ ಕಶ್ಯಪ್‌ ಅವರು ಮೆಚ್ಚುಗೆ ನೀಡಿದ್ದರು.

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಮತ್ತು ನಟ ರಾಜ್ ಬಿ ಶೆಟ್ಟಿ ಅವರು ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್ ಎರಡರಲ್ಲೂ ತಮ್ಮದೇ ಆದ ಹೆಸರು ಮಾಡಿದ್ದಾರೆ.

ಮಮ್ಮುಟ್ಟಿ ಜೊತೆಯಲ್ಲಿ ಟರ್ಬೊ ಸಿನಿಮಾದಲ್ಲಿ ನಟಿಸುತ್ತಿರುವ ರಾಜ್ ಬಿ ಶೆಟ್ಟಿ ಮಲಯಾಳಂ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಇದೀಗ ಬಾಲಿವುಡ್‌ ನಿಂದ ಹಿಂದಿ ಸಿನೆಮಾವೊಂದು ಅರಸಿ ಬಂದಿದ್ದು, ವಿಶೇಷ ಅಂದ್ರೆ ಈ ಸಿನೆಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ತಮ್ಮ ಸಿನಿಮಾ ಪರಿಧಿಯನ್ನು ವಿಸ್ತರಿಸುತ್ತಿದ್ದಾರೆ. ಅನುರಾಗ್ ಕಶ್ಯಪ್ ಅವರ ಮುಂಬರುವ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಬಾಬಿ ಡಿಯೋಲ್, ಸಾನ್ಯಾ ಮಲ್ಹೋತ್ರಾ, ಸಬಾ ಆಜಾದ್ ಮತ್ತು ಜೋಜು ಜಾರ್ಜ್ ಒಳಗೊಂಡಿರುವ ತಾರಾ ಬಳಗವನ್ನು ಸೇರಿಕೊಳ್ಳಲಿದ್ದಾರೆ. ನಾನು ಈ ಪಾತ್ರವನ್ನು ಮುಖ್ಯವಾಗಿ ಅನುರಾಗ್ ಕಶ್ಯಪ್‌ ಅವರಿಗಾಗಿ ಮಾಡುತ್ತಿದ್ದೇನೆ, ಅವರು ನನಗೆ ದೊಡ್ಡ ಸ್ಫೂರ್ತಿಯಾಗಿದ್ದಾರೆ" ಎಂದು ರಾಜ್ ಹೇಳಿದ್ದಾರೆ. ನಾನು ನಿರ್ದೇಶಕನಾಗಬೇಕೆಂದು ಆಶಿಸಿದಾಗ, ಕಶ್ಯಪ್ ಅವರ ಸಿನಿಮಾಗಳು ನನಗೆ ಸ್ಫೂರ್ತಿಯಾದವು. ನಾನು ಮತ್ತು ನನ್ನ ಛಾಯಾಗ್ರಾಹಕ ಪ್ರವೀಣ್ ಶ್ರೀಯಾನ್ ಅವರ ಕೆಲಸದ ಬಗ್ಗೆ ಆಗಾಗ್ಗೆ ಚರ್ಚಿಸುತ್ತಿದ್ದೆವು.

ಈ ಹಿಂದೆ ರಾಜ್‌ ಬಿ ಶೆಟ್ಟಿ ನಿರ್ದೇಶಿಸಿದ್ದ ಗರುಡ ಗಮನ ವೃಷಭ ವಾಹನ ಸಿನೆಮಾಗೆ ಅನುರಾಗ್ ಕಶ್ಯಪ್‌ ಅವರು ಮೆಚ್ಚುಗೆ ನೀಡಿದ್ದರು. ನನ್ನ ಫೇವರೆಟ್ ನಿರ್ದೇಶಕ ಎಂದು ರಾಜ್ ಬಿ ಶೆಟ್ಟಿಯವರನ್ನು ಹೊಗಳಿ ಅವರಿಗೆ ನಾಲ್ಕುವರೆ ಸ್ಟಾರ್‌ ಗಳನ್ನು ಕೂಡಾ ನೀಡಿದ್ದರು. ಅಲ್ಲದೇ ಈ ಸಿನೆಮಾವನ್ನು ಎಲ್ಲರೂ ನೋಡುವಂತೆ ಮನವಿ ಮಾಡಿಕೊಂಡಿದ್ದಾರೆ.ಅವರೊಂದಿಗೆ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ. ಅವರು ನನಗೆ ಅವರ ಸಿನಿಮಾದಲ್ಲಿ ಪಾತ್ರನೀಡಲು ಮುಂದಾದಾಗ, ನಾನು ತಕ್ಷಣ ಒಪ್ಪಿಕೊಂಡೆ. ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗದಿದ್ದರೂ, ಅವರ ಕೆಲಸವು ಯಾವಾಗಲೂ ದೊಡ್ಡ ಸ್ಫೂರ್ತಿಯಾಗಿದೆ. ಅವರೊಂದಿಗೆ ಕೆಲಸ ಮಾಡುವುದು ದೊಡ್ಡ ಕನಸಾಗಿದೆ. ನಾನು ಈ ಅತಿಥಿ ಪಾತ್ರವನ್ನು ಅನುರಾಗ್ ಕಶ್ಯಪ್ ಅವರಿಗಾಗಿ ಮಾತ್ರ ಮಾಡುತ್ತಿದ್ದೇನೆ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ.

ಇದರ ನಡುವೆ ರಾಜ್‌ ಬಿ ಶೆಟ್ಟಿ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಚಿತ್ರಕ್ಕೆ “ರಕ್ಕಸಪುರದೋಳ್‌’ ಎಂಬ ಟೈಟಲ್‌ ಇಡಲಾಗಿದೆ. ಸಾಹಸ ನಿರ್ದೇಶಕ ರವಿವರ್ಮ ನಿರ್ಮಾಣದ ಈ ಚಿತ್ರವನ್ನು ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ರಾಜ್‌ ಬಿ ಶೆಟ್ಟಿ, “ರಕ್ಕಸಪುರದೋಳ್‌ ಚಿತ್ರದ ಕಥೆ ತುಂಬಾ ಚೆನ್ನಾಗಿದೆ. ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಬೇಕಾಗಿರುವಂತಹ ಕಥೆಯನ್ನು ನಿರ್ದೇಶಕ ರವಿ ಮಾಡಿಕೊಂಡಿದ್ದಾರೆ. ನಾನು ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಿಂದಿನ ಚಿತ್ರಗಳಿಗಿಂತ ಭಿನ್ನ ಪಾತ್ರ’ ಎಂದರು.

ಕಳೆದ ಹತ್ತು ವರ್ಷಗಳಿಂದ ಪ್ರೇಮ್‌ ಅವರ ಬಳಿ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ. ರಕ್ಕಸ ಎಂದರೆ ರಾಕ್ಷಸ. ಪುರ ಎಂದರೆ ಊರು. ರಾಕ್ಷಸರೇ ಇರುವ ಊರು ಎಂಬುದು ಈ ಶೀರ್ಷಿಕೆಯ ಅರ್ಥ. ಮನುಷ್ಯನಲ್ಲಿ ಎರಡು ಗುಣಗಳಿರುತ್ತದೆ. ಒಂದು ಒಳ್ಳೆಯದು. ಮತ್ತೂಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು ರಕ್ಕಸ ಎನ್ನಬಹುದು. ನಿರ್ಮಾಪಕ ರವಿವರ್ಮ ಹಾಗೂ ನಾಯಕ ರಾಜ್‌ ಬಿ ಶೆಟ್ಟಿ ಅವರು ಕಥೆ ಮೆಚ್ಚಿಕೊಂಡದ್ದು ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ’ ಎಂದು ನಿರ್ದೇಶಕ ರವಿ ಸಾರಂಗ ತಿಳಿಸಿದ್ದಾರೆ.

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿದೆ. ಸ್ವಾತಿಷ್ಠ ಕೃಷ್ಣ, ಬಿ ಸುರೇಶ್ ಮತ್ತು ಅರ್ಚನಾ ಕೊಟ್ಟಿಗೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT