ಸಿನಿಮಾ ಸುದ್ದಿ

ಕಿರಣ್ ರಾಜ್ ಅಭಿನಯದ 'ರಾನಿ' ಬಿಡುಗಡೆ ದಿನಾಂಕ ಮುಂದೂಡಿಕೆ

ಸೆಪ್ಟೆಂಬರ್ 12 ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆಗಸ್ಟ್ 30 ರಂದು ಬೇರೆ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿದ್

ಬೆಳ್ವಿತೆರೆಯಲ್ಲಿ ನಾಯಕ ನಟನಾಗಿ ನಿಧಾನವಾಗಿ ನೆಲೆ ಕಂಡುಕೊಳ್ಳುತ್ತಿರುವ ಕಿರುತೆರೆ ಕಲಾವಿದ ಕಿರಣ್ ರಾಜ್, ರಾನಿ ಬಿಡುಗಡೆಗೆ ಕಾತುರದಿಂದ ತಯಾರಿ ನಡೆಸುತ್ತಿದ್ದಾರೆ. ಈ ಮೊದಲು ಆಗಸ್ಟ್ 30 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಆದರೆ ಚಿತ್ರ ತಂಡ ಈಗ ಸಿನಿಮಾ ರಿಲೀಸ್ ಡೇಟ್ ಬದಲಾಯಿಸಿದ್ದು, ಸೆಪ್ಟೆಂಬರ್ 12 ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆಗಸ್ಟ್ 30 ರಂದು ಬೇರೆ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಥಿಯೇಟರ್ ಸಮಸ್ಯೆ ಆಗದಿರಲಿ ಎಂಬ ಕಾರಣಕ್ಕೆ ಚಿತ್ರತಂಡ ಈ ನಿರ್ಧಾರ ಕೈಗೊಡಿದೆ.

ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಭೀಮಾ ಮತ್ತು ಕೃಷ್ಣಂ ಪ್ರಣಯ ಸಖಿ ಯಶಸ್ಸಿಗೆ ಚಿತ್ರ ತಂಡಗಳಿಗೆ ಧನ್ಯವಾದ ತಿಳಿಸಿದ್ದಾರೆ. ಈ ಎರಡು ಸಿನಿಮಾಗಳ ರಿಲೀಸ್ ನಿಂದಾಗಿ ಥಿಯೇಟರ್ ಲಭ್ಯತೆಯ ಮೇಲೆ ಪರಿಣಾಮ ಬೀರಿತು. ಥಿಯೇಟರ್ ಲಭ್ಯತೆಯ ವಿಳಂಬವು ರಾನಿ ಸಿನಿಮಾ ರೀಲಿಸ್ ಗೆ ಸಹಾಯ ಮಾಡುತ್ತದೆ ಎಂದು ಅವರು ವಿವರಿಸಿದರು.

ಕಿರಣ್ ರಾಜ್ ಸಿನಿಮಾ ರಿಲೀಸ್ ವಿಳಂಬವಾಗುತ್ತಿರುವುದನ್ನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ಚಲನಚಿತ್ರವು ಒಂದು ಪ್ರಮುಖ ನಿರ್ಮಾಣವಾಗಿದೆ ಮತ್ತು ಇದು ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ನಾವು ಬಯಸುತ್ತೇವೆ. ಎಂಟು ವರ್ಷಗಳ ಅವಧಿಯ ಕಥೆ ಮತ್ತು ನನ್ನ ಪಾತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ಒಳಗೊಂಡಿದ್ದು. ರಾನಿ ಸಿನಿಮಾದ ಮಹತ್ವವನ್ನು ತಿಳಿಸಿದ ಕಿರಣ್ ರಾಜ್ ಅದರ ಯಶಸ್ಸು ತನಗೆ ನಿರ್ಣಾಯಕವಾಗಿದೆ ಎಂದಿದ್ದಾರೆ. ನಾವು ನಮ್ಮ ಹಣವನ್ನು ಹೂಡಿಕೆ ಮಾಡಿದ್ದೇವೆ ಮತ್ತು ನಿರ್ಮಾಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಿಲ್ಲ ಎಂದಿದ್ದಾರೆ.

ಏತನ್ಮಧ್ಯೆ, ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ರಾಯಚೂರು, ಗುಲ್ಬರ್ಗಾ, ದಾವಣಗೆರೆ, ತುಮಕೂರು, ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಲ್ಲಿ ಪ್ರೇಕ್ಷಕರ ಆದ್ಯತೆಗಳ ಬಗ್ಗೆ ಸಮೀಕ್ಷೆ ನಡೆಸಿದ್ದಾರೆ. ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಆಧರಿಸಿ, ಗುರುತೇಜ್ ರಾನಿಗೆ ಕೌಟುಂಬಿಕ ಮತ್ತು ಕಮರ್ಷಿಯಲ್ ಅಂಶಗಳನ್ನು ಸಂಯೋಜಿಸಿದ್ದಾರೆ.

ಕಿರಣ್ ರಾಜ್ ನಾಯಕರಾಗಿರುವ ಈ ಚಿತ್ರವನ್ನು ಸ್ಟಾರ್ ಕ್ರಿಯೇಷನ್ಸ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗ್ಡೆ ನಿರ್ಮಿಸಿದ್ದಾರೆ. ಸಂಯುಕ್ತ, ಅಪೂರ್ವ, ರಾಧಾ, ರವಿಶಂಕರ್ ಮತ್ತು ಮೈಕೋ ನಾಗರಾಜ್ ಅವರು ವಿವಿಧ ಪಾತ್ರಗಳಲ್ಲಿ ನಟಿಸಿದ್ದಾರೆ. ವಿನೋದ್ ಮಾಸ್ಟರ್ ಅವರ ಆರು ನೃತ್ಯ ಸಂಯೋಜನೆಯ ಆಕ್ಷನ್ ಸೀಕ್ವೆನ್ಸ್‌ಗಳು ಚಿತ್ರದಲ್ಲಿವೆ. ರಾಘವೇಂದ್ರ ಬಿ ಕೋಲಾರ ಅವರ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ ಮತ್ತು ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT