ನಟ ಸಿದ್ದಿಕ್ 
ಸಿನಿಮಾ ಸುದ್ದಿ

ಲೈಂಗಿಕ ಕಿರುಕುಳ ಆರೋಪ: AMMA ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ದಿಕ್ ರಾಜೀನಾಮೆ

ನನ್ನ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳ ಹಿನ್ನೆಲೆಯಲ್ಲಿ ನಾನು ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಸಿದ್ದಿಕ್ ಹೇಳಿದ್ದಾರೆ ಎಂದು ಒನ್ಮನೋರಮಾ ವರದಿ ಮಾಡಿದೆ.

ಕೊಚ್ಚಿ: ಮಲಯಾಳಂನ ಹಿರಿಯ ನಟ ಸಿದ್ದಿಕ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಸಂಘದ ಅಧ್ಯಕ್ಷ ಮೋಹನ್‌ಲಾಲ್‌ ಅವರಿಗೆ ಪತ್ರ ಬರೆದು ಭಾನುವಾರ ಬೆಳಗ್ಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ. ನನ್ನ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳ ಹಿನ್ನೆಲೆಯಲ್ಲಿ ನಾನು ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಸಿದ್ದಿಕ್ ಹೇಳಿದ್ದಾರೆ ಎಂದು ಒನ್ಮನೋರಮಾ ವರದಿ ಮಾಡಿದೆ.

2019 ರಲ್ಲಿ ಸಿದ್ದಿಕ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ರೇವತಿ ಸಂಪತ್ ಅವರು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪುನರುಚ್ಚರಿಸಿದ ಒಂದು ದಿನದ ನಂತರ ರಾಜೀನಾಮೆ ನೀಡಿದ್ದಾರೆ. ನನಗೆ 21 ವರ್ಷ ವಯಸ್ಸಿದ್ದಾಗ ಸಿದ್ದಿಕ್ 2016 ರಲ್ಲಿ ಚಲನಚಿತ್ರ ಪ್ರಾಜೆಕ್ಟ್ ಕುರಿತು ಚರ್ಚಿಸುವ ನೆಪದಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ಬಳಸಿಕೊಂಡು ಅವರನ್ನು ಸಂಪರ್ಕಿಸಿದ್ದರು ಎಂದು ರೇವತಿ ಆರೋಪಿಸಿದ್ದಾರೆ.

ಅವನು ಒಬ್ಬ ಕ್ರಿಮಿನಲ್, ಅವನು ನನ್ನನ್ನು ಒಂದು ಗಂಟೆ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದನು. ಅವನು ಆಫರ್ ಬಗ್ಗೆ ಚರ್ಚಿಸಲು ಹೋಟೆಲ್ ಮ್ಯಾಸ್ಕಾಟ್‌ಗೆ ಬರುವಂತೆ ಹೇಳಿದನು. ಹೊಂದಾಣಿಕೆ ಮಾಡಿಕೊಳ್ಳಲು ನಾನು ರೆಡಿನಾ ಎಂದು ಅವನು ನನ್ನನ್ನು ಕೇಳಿದಾಗ ತಕ್ಷಣ ನನಗೆ ಆಘಾತವಾಯಿತು ಎಂದು ರೇವತಿ ಹೇಳಿದರು.

ಎಡವೇಲ ಬಾಬು ರಾಜೀನಾಮೆ ನೀಡಿದ ಬಳಿಕ ಎರಡು ತಿಂಗಳ ಹಿಂದೆಯಷ್ಟೇ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಆಯ್ಕೆಯಾಗಿದ್ದರು. ಎಡವೇಲ ಬಾಬು ಅವರ ಮೇಲೂ ಜೂನಿಯರ್ ಆರ್ಟಿಸ್ಟ್ ನಿಂದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಮಲಯಾಳಂ ಚಲಚಿತ್ರೋದ್ಯಮದಲ್ಲಿ ಲೈಂಗಿಕ ದೌರ್ಜನ್ಯದ ಹಲವು ಘಟನೆಗಳು ನಡೆದಿವೆ ಎಂದು ಜಸ್ಟಿಸ್ ಹೇಮಾ ಸಮಿತಿಯ ವರದಿ ಬಿಡುಗಡೆಯ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT