ಭೈರತಿ ರಣಗಲ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಶಿವಣ್ಣ ನಟನೆಯ 'ಭೈರತಿ ರಣಗಲ್' ನವೆಂಬರ್ 15ಕ್ಕೆ ತೆರೆಗೆ

‘ಭೈರತಿ ರಣಗಲ್‌’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ‌ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ನಟಿಸಿದ್ದಾರೆ.

ಶಿವರಾಜ್‌ ಕುಮಾರ್‌ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ನವೆಂಬರ್‌ 15ರಂದು ‘ಭೈರತಿ ರಣಗಲ್‌’ ಸಿನಿಮಾ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಿಸಿದೆ.

‘ಭೈರತಿ ರಣಗಲ್‌’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ‌ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ನಟಿಸಿದ್ದಾರೆ. ಈ ಮೊದಲು ಆಗಸ್ಟ್ 15 ಕ್ಕೆ ರಿಲೀಸ್ ಮಾಡಲು ಚಿತ್ರ ತಂದ ನಿರ್ಧರಿಸಿತ್ತು.

ಅಕ್ಟೋಬರ್‌ನಲ್ಲಿ ಕೆಲವು ದೊಡ್ಡ ಬ್ಯಾನರ್ ಗ ಚಿತ್ರಗಳ ಬಿಡುಗಡೆಗೆ ನಿರ್ಧರಿಸಲಾಗಿದೆ, ಧ್ರುವ ಸರ್ಜಾ ಅವರ ಮಾರ್ಟಿನ್, ಉಪೇಂದ್ರ ಅವರ ಯುಐ, ರಜನಿಕಾಂತ್ ಅವರ ವೆಟ್ಟೈಯನ್, ಸೂರ್ಯ ಅವರ ಕಂಗುವ, ಅಕ್ಷಯ್ ಕುಮಾರ್ ಅವರ ಸ್ಕೈ ಫೋರ್ಸ್ ಸೇರಿದಂತೆ ಹಲವು ಸಿನಿಮಾಗಳು ರಿಲೀಸ್ ಆಗುವ ಕಾರಣದಿಂದ ಭೈರತಿ ರಣಗಲ್ ತಂಡವು ಬಿಡುಗಡೆ ದಿನಾಂಕ ಬದಲಾಯಿಸಲು ನಿರ್ಧರಿಸಲಾಗಿದೆ.

ಭೈರತಿ ರಣಗಲ್ ನಲ್ಲಿ ಶಿವರಾಜಕುಮಾರ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್‌ಕುಮಾರ್, ಶ್ರೀ ಮುರಳಿ, ಶಾನ್ವಿ ಶ್ರೀವಾಸ್ತವ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ನಂತರ ತಮಿಳಿನಲ್ಲಿ ಸಿಲಂಬರಸನ್ ನಟಿಸಿದ ಪಾತು ಥಾಲಾ ಎಂದು ಮರುನಿರ್ಮಾಣವಾಯಿತು. ನರ್ತನ್ ನಿರ್ದೇಶನದ ಮತ್ತು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ ಭೈರತಿ ರಣಗಲ್ ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ಬಾಲಿವುಡ್ ನಟ ರಾಹುಲ್ ಬೋಸ್ ಮತ್ತು ಅವಿನಾಶ್ ಇದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video