ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮಲಯಾಳಂ ನಟ ಸಿದ್ಧಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿದ್ಧಿಕ್
Shilpa D
Updated On : 28 Aug 2024, 1:43 pm

ತಿರುವನಂತಪುರ: ಮಲಯಾಳಂ ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2016ರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿರುವುದರಿಂದ, ಐಪಿಸಿ ಅಡಿಯಲ್ಲೇ ಪ್ರಕರಣ ದಾಖಲಿಸಲಾಗಿದೆ.2009ರಲ್ಲಿ ಪಲೇರಿ ಮಾಣಿಕ್ಯಂ ಚಿತ್ರದಲ್ಲಿ ನಟಿಸಲು ಆಹ್ವಾನಿಸಿದ್ದ ನಿರ್ದೇಶಕರು, ಲೈಂಗಿಕ ಉದ್ದೇಶದಿಂದ ಅನುಚಿತವಾಗಿ ಸ್ಪರ್ಶಿಸಿದ್ದರು ಎಂದು ನಟಿ ಆರೋಪಿಸಿದ್ದರು.

ಆರೋಪದ ಬೆನ್ನಲ್ಲೇ ರಂಜಿತ್, ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದಿಕ್ ಸಹ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2017ರಲ್ಲಿ ನಟ ದಿಲೀಪ್ ಹೆಸರು ಕೇಳಿಬಂದಿದ್ದ ನಟಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಚಿತ್ರರಂಗದಲ್ಲಿ ಕಲಾವಿದೆಯರ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ಕುರಿತಂತೆ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಹೇಮಾ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿತ್ತು. 2019ರಲ್ಲೇ ಸಮಿತಿಯು ವರದಿಯನ್ನು ಸಲ್ಲಿಕೆ ಮಾಡಿದ್ದು, ಆ ವರದಿಯು ಇತ್ತೀಚೆಗೆ ಬಹಿರಂಗಗೊಂಡಿತ್ತು.

Advertisement

Advertisement

Also Read

ಲೈಂಗಿಕ ಕಿರುಕುಳ ಆರೋಪ: AMMA ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ದಿಕ್ ರಾಜೀನಾಮೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments