ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ.
ಈ ಚಿತ್ರ ಸಂದೀಪ್ ಸಿಂಗ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. 2027ರ ಜನವರಿ 21ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಸಂದೀಪ್ ಸಿಂಗ್ ಅವರು 2024ರ ಫೆಬ್ರುವರಿ 16ರಂದು ಈ ಸಿನಿಮಾವನ್ನು ಘೋಷಿಸಿದ್ದರು. ಹಿಂದಿ, ಮರಾಠಿ, ಕನ್ನಡ, ತಮಿಳು ಸೇರಿ ಆರು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾವನ್ನು ಅವರು ನಿರ್ದೇಶಕ ಸಂದೀಪ್ ಸಿಂಗ್ ಊಹಿಸಿರುವ ರೀತಿ ಅದ್ಭುತವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪಾತ್ರ ಅದೆಷ್ಟು ಅದ್ಭುತವಾದುದು ಎಂದರೆ ಕತೆ ಕೇಳಿದ ಕ್ಷಣ ಕಾಲವೂ ಯೋಚಿಸದೆ ಒಪಪಿಕೊಂಡುಬಿಟ್ಟೆ. ಛತ್ರಪತಿ ಶಿವಾಜಿಯವರ ಪಾತ್ರದಲ್ಲಿ ನಟಿಸುವುದು ಪದಗಳಿಗೆ ಮೀರಿದ ಗೌರವ. ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ, ಶತಮಾನಗಳ ಕಾಲ ಅವರು ಪ್ರಭಾವ ಬೀರಿದ್ದಾರೆ. ಅಂಥಹಾ ಅದ್ಭುತವಾದ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಅಭೂತಪೂರ್ವ ಅವಕಾಶ ಮತ್ತು ಗೌರವ’ ಎಂದಿದ್ದಾರೆ ರಿಷಬ್ ಶೆಟ್ಟಿ.