ಅಲ್ಲ ಅರ್ಜುನ್ 
ಸಿನಿಮಾ ಸುದ್ದಿ

ಅಲ್ಲು ಅರ್ಜುನ್‌ಗೆ ಸಂಕಷ್ಟ: 14 ದಿನಗಳ ನ್ಯಾಯಾಂಗ ಬಂಧನ, ಚಂಚಲಗೂಡ ಜೈಲಿಗೆ ನಟ!

ಡಿಸೆಂಬರ್ 4ರಂದು ತಮ್ಮ ನೆಚ್ಚಿನ ನಟನನ್ನು ನೋಡಲು ಹೈದರಾಬಾದ್ ಥಿಯೇಟರ್‌ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದ್ದು, ಕಾಲ್ತುಳಿತದಿಂದಾಗಿ 35 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು.

ಹೈದರಾಬಾದ್: ಜನಪ್ರಿಯ ನಟ ಅಲ್ಲು ಅರ್ಜುನ್ ಅವರ 'ಪುಷ್ಪ-2: ದಿ ರೂಲ್' ಚಿತ್ರದ ಪ್ರದರ್ಶನದ ವೇಳೆ ಡಿಸೆಂಬರ್ 4ರಂದು ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಅಲ್ಲು ಅರ್ಜುನ್‌ನನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಾಸ್ತವವಾಗಿ, ಅಲ್ಲು ಅರ್ಜುನ್ ರನ್ನು ವಶಕ್ಕೆ ಪಡೆದ ಪೊಲೀಸರು ನಂತರ ನಟನಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬಂಧನ ಬೆನ್ನಲ್ಲೇ ಅಲ್ಲು ಅರ್ಜುನ್ ಹೈಕೋರ್ಟ್‌ನಿಂದ ತುರ್ತು ವಿಚಾರಣೆಯನ್ನು ಕೋರಲು ತನ್ನ ವಕೀಲರೊಂದಿಗೆ ಮಾತನಾಡಿದ್ದಾರೆ. ಇನ್ನು ನಟನ ಬಂಧನದ ನಂತರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಮತ್ತು ಕಾನೂನು ತನ್ನ ಹಾದಿಯಲ್ಲಿ ಸಾಗುತ್ತಿದೆ ಎಂದು ಹೇಳಿದರು.

ಡಿಸೆಂಬರ್ 4ರಂದು ತಮ್ಮ ನೆಚ್ಚಿನ ನಟನನ್ನು ನೋಡಲು ಹೈದರಾಬಾದ್ ಥಿಯೇಟರ್‌ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದ್ದು, ಕಾಲ್ತುಳಿತದಿಂದಾಗಿ 35 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಅವರ ಎಂಟು ವರ್ಷದ ಮಗನಿಗೆ ಉಸಿರುಗಟ್ಟಿದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನು ಮೃತಳ ಕುಟುಂಬದವರ ದೂರಿನ ಮೇರೆಗೆ ನಟ ಮತ್ತು ಅವರ ಭದ್ರತಾ ತಂಡ ಹಾಗೂ ಥಿಯೇಟರ್ ಆಡಳಿತ ಮಂಡಳಿಯ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT