ಅಪಾಯವಿದೆ ಎಚ್ಚರಿಕೆ ಸಿನಿಮಾ ತಂಡ 
ಸಿನಿಮಾ ಸುದ್ದಿ

‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಮೂಲಕ ಬೆಳ್ಳಿತೆರೆಗೆ ವಿಕಾಶ್‌ ಉತ್ತಯ್ಯ ಎಂಟ್ರಿ!

ಚಿತ್ರರಂಗಕ್ಕೂ ನನಗೂ ಹತ್ತು ವರ್ಷಗಳ ನಂಟು. ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇರುವ ನಾನು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ.

ಅಣ್ಣಯ್ಯ ಧಾರಾವಾಹಿ ಮೂಲಕ ಗುರುತಿಸಿಕೊಂಡಿರುವ ವಿಕಾಶ್‌ ಉತ್ತಯ್ಯ ನಾಯಕನಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಅಭಿಜಿತ್‌ ತೀರ್ಥಹಳ್ಳಿ ನಿರ್ದೇಶನದ ‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಮೂಲಕ ಪದಾರ್ಪಣೆ ಮಾಡುತ್ತಿದ್ದಾರೆ.

ಈ ಸಿನಿಮಾವನ್ನು ವಿ.ಜಿ.ಮಂಜುನಾಥ್ ಹಾಗೂ ಪೂರ್ಣಿಮಾ ಎಂ.ಗೌಡ ನಿರ್ಮಾಣ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಯಿತು. ಚಿತ್ರದ ನಿರೂಪಣೆಯು ಪ್ರಕೃತಿಯ ಐದು ಅಂಶಗಳ ಸುತ್ತ ಕೇಂದ್ರೀಕೃತವಾಗಿದೆ ಎಂದು ಪೋಸ್ಟರ್ ಸೂಚಿಸಿದೆ, ಭೂಮಿ, ಗಾಳಿ, ನೀರು, ಬೆಂಕಿ ಮತ್ತು ಆಕಾಶದ ಸುತ್ತುತ್ತದೆ. ಚಿತ್ರರಂಗಕ್ಕೂ ನನಗೂ ಹತ್ತು ವರ್ಷಗಳ ನಂಟು. ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇರುವ ನಾನು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ. ಪಂಚಭೂತಗಳ ಆಧಾರದ ಮೇಲೆ ಈ ಚಿತ್ರದ ಕಥೆ ಹೆಣೆಯಲಾಗಿದೆ. ವಿಕಾಶ್ ಉತ್ತಯ್ಯ ‘ಸೂರಿ’ ಎಂಬ ಪಾತ್ರದಲ್ಲಿ, ರಾಘವ್ ಕೊಡಚಾದ್ರಿ ಹಾಗೂ ಮಿಥುನ್ ತೀರ್ಥಹಳ್ಳಿ ವಿಕಾಶ್ ಅವರ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ ಅಡ್ವೆಂಚರ್‌ ಹಾರಾರ್ ಜಾನಾರ್‌ನಲ್ಲಿ ಈ ಚಿತ್ರವಿದೆ’ ಎಂದು ಅಭಿಜಿತ್‌ ತೀರ್ಥಹಳ್ಳಿ ಹೇಳಿದ್ದಾರೆ.

ಕೃಷಿಯಂತೆ ಸಿನಿಮಾವು ಸಮರ್ಪಣೆಯನ್ನು ಬಯಸುತ್ತದೆ. ಇದು ನಿರ್ದೇಶಕ ಅಭಿಜಿತ್ ಅವರ ಬಹುಕಾಲದ ಕನಸಾಗಿದ್ದು, ಅದನ್ನು ನೋಡಿ ನಾನು ಥ್ರಿಲ್ ಆಗಿದ್ದೇನೆ. ಚಿತ್ರದಲ್ಲಿ ನಾನು ಸೂರಿ ಎಂಬ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತೇನೆ ಎಂದು ವಿಕಾಶ್ ಉತಯ್ಯ ತಿಳಿಸಿದ್ದಾರೆ. ಈ ಹಿಂದೆ ಕದ್ದು ಮುಚ್ಚಿ ಚಿತ್ರದಲ್ಲಿ ಸಹಕರಿಸಿದ್ದ ನಿರ್ಮಾಪಕರಾದ ವಿಜಿ ಮಂಜುನಾಥ್ ಮತ್ತು ಪೂರ್ಣಿಮಾ ಎಂ ಗೌಡ ಈ ಯೋಜನೆಗಾಗಿ ಮತ್ತೆ ಕೈಜೋಡಿಸಿದ್ದಾರೆ. ಸುನಾದ್ ಗೌತಮ್ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜನೆ ಎರಡನ್ನೂ ನಿರ್ವಹಿಸಿದ್ದಾರೆ. ಆನಂದ್ ಆಡಿಯೊ ಸಂಗೀತ ಹಕ್ಕುಗಳನ್ನು ಪಡೆದುಕೊಂಡಿದೆ, ಹರ್ಷಿತ್ ಪ್ರಭು ಸಂಕಲನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಪಾಯವಿದೆ ಎಚ್ಚರಿಕೆ ಸಿನಿಮಾ 2023ರ ಜನವರಿಯಲ್ಲಿ ರಿಲೀಸ್ ಆಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!