ಕಿಚ್ಚ ಸುದೀಪ್ ಅಭಿನಯದ ಮತ್ತು ವಿಜಯ್ ಕಾರ್ತಿಕೇಯ ನಿರ್ದೇಶನದ ಬಹು ಚರ್ಚಿತ ಥ್ರಿಲ್ಲರ್ ಮ್ಯಾಕ್ಸ್, ಬಿಡುಗಡೆಗೆ ಮುಂಚಿತವಾಗಿ ಸೆನ್ಸಾರ್ ಮಂಡಳಿಯಿಂದ 'U/A' ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಈ ಚಿತ್ರವು ಡಿಸೆಂಬರ್ 25 ರಂದು ಕನ್ನಡದಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ, ತಮಿಳು ಮತ್ತು ತೆಲುಗು ಆವೃತ್ತಿಗಳು ಡಿಸೆಂಬರ್ 27 ರಂದು ರಿಲೀಸ್ ಆಗಲಿದೆ.
'ಮ್ಯಾಕ್ಸ್' ಸಿನಿಮಾ ಬಿಡುಗಡೆಗೆ 10 ದಿನ ಮಾತ್ರ ಬಾಕಿಯಿದೆ. ಸದ್ಯ ಸಿನಿಮಾ ಪ್ರಮೋಷನ್‌ಗೆ ಚಾಲನೆ ಕೊಡಲಾಗುತ್ತಿದೆ. ಇನ್ನು ಚಿತ್ರ ಸೆನ್ಸಾರ್ ಮುಗಿಸಿ ತೆರೆಗಪ್ಪಳಿಸಲು ಸಜ್ಜಾಗಿದೆ. ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ಚಿತ್ರದ ವಿತರಣೆ ಹಕ್ಕು ಕೊಂಡುಕೊಂಡಿದೆ. ತಮಿಳು ಹಾಗೂ ಕನ್ನಡದಲ್ಲಿ 'ಮ್ಯಾಕ್ಸ್' ಸಿನಿಮಾ ನಿರ್ಮಾಣ ಆಗಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಬಿಡುಗಡೆ ಆಗಲಿದೆ. ಮತ್ತೊಮ್ಮೆ ಖಡಕ್ ಪಾತ್ರದಲ್ಲಿ ಅಬ್ಬರಿಸಲು ಸುದೀಪ್ ಅಣಿಯಾಗಿದ್ದಾರೆ.
ಇದು ರೆಗ್ಯುಲರ್ ಕಮರ್ಷಿಯಲ್ ಸಿನಿಮಾ ಅಲ್ಲ. ಇಲ್ಲಿ ಸುದೀಪ್‌ಗೆ ನಾಯಕಿ ಇರಲ್ಲ. ಒಂದು ರಾತ್ರಿಯಲ್ಲಿ ನಡೆಯುವ ಕತೆ ಇದು ಎನ್ನಲಾಗ್ತಿದೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಿಚ್ಚ ಅಬ್ಬರಿಸಿದ್ದಾರೆ. ಸಂಯುಕ್ತಾ ಹೊರನಾಡ್, ಉಗ್ರಂ ಮಂಜು ಸೇರಿದಂತೆ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗಾಗಲೇ ಎರಡು ಟೀಸರ್ ಹಾಗೂ ಒಂದು ಸಾಂಗ್ ರಿಲೀಸ್ ಆಗಿ ಸದ್ದು ಮಾಡಿದೆ. ಇದೀಗ ಚಿತ್ರದ ಆಡಿಯೋ ಲಾಂಚ್ ಈವೆಂಟ್‌ಗೆ ವೇದಿಕೆ ಸಿದ್ಧವಾಗಿದೆ. ನಗರದ ಒರಾಯನ್ ಮಾಲ್ ಆವರಣದಲ್ಲಿ ಇಂದು(ಡಿಸೆಂಬರ್ 15) ಸಂಜೆ 'ಮ್ಯಾಕ್ಸ್' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಅಭಿಮಾನಿಗಳು ಚಿತ್ರದ ಇನ್ನುಳಿದ ಹಾಡುಗಳನ್ನು ಕೇಳಲು ಉತ್ಸುಕರಾಗಿದ್ದಾರೆ. ಇನ್ನು ಟ್ರೈಲರ್ ಯಾವಾಗ ರಿಲೀಸ್ ಆಗುತ್ತದೆ ಎನ್ನುವ ಪ್ರಶ್ನೆ ಕೂಡ ಅಭಿಮಾನಿಗಳನ್ನು ಕಾಡುತ್ತಿದೆ. 'ಮ್ಯಾಕ್ಸ್' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯುಎ ಸರ್ಟಿಫಿಕೇಟ್ ಸಿಕ್ಕಿದೆ. ಚಿತ್ರದ ರನ್‌ಟೈಮ್ 2 ಗಂಟೆ 23 ನಿಮಿಷ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ದೊಡ್ಡ ಸಿನಿಮಾಗಳ ರನ್‌ಟೈಮ್ ಹೆಚ್ಚಾಗುತ್ತಾ ಹೋಗುತ್ತಿದೆ. ಆದರೆ ಕನ್ನಡದ 'ಯುಐ' ಹಾಗೂ 'ಮ್ಯಾಕ್ಸ್' ಚಿತ್ರಗಳ ಕಾಲಾವಧಿ ಎರಡೂವರೆ ಗಂಟೆ ದಾಟಿಲ್ಲ. ಸದ್ಯ ವೀಕೆಂಡ್ ಬಿಗ್‌ಬಾಸ್ ಶೋ ಎಪಿಸೋಡ್ ಚಿತ್ರೀಕರಣ ಮುಗಿಸಿರುವ ಕಿಚ್ಚ 'ಮ್ಯಾಕ್ಸ್' ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಸಿದ್ಧರಾಗಿದ್ದಾರೆ.
ಒರಾಯನ್ ಮಾನ್ (ಲೇಕ್ ಸೈಡ್) ಈವೆಂಟ್ ಪ್ಲ್ಯಾನ್ ನಡೀತಿದೆ. ಇತ್ತೀಚೆಗೆ ಆಡಿಯೋ ಲಾಂಚ್ ಕಾನ್ಸೆಪ್ಟ್ ಕಡಿಮೆ ಆಗುತ್ತಿದೆ. ಪ್ರೀ ರಿಲೀಸ್ ಈವೆಂಟ್ ಟ್ರೆಂಡ್ ಶುರುವಾಗಿದೆ. 'ಮ್ಯಾಕ್ಸ್' ವಿಚಾರದಲ್ಲಿ ಅದು ಬದಲಾಗಿದೆ. 5 ದಿನಗಳ ಅಂತರದಲ್ಲಿ 'ಮ್ಯಾಕ್ಸ್' ಹಾಗೂ 'ಯುಐ' ಸಿನಿಮಾಗಳು ತೆರೆಗೆ ಬರ್ತಿವೆ. ಕೆಜಿ ರಸ್ತೆಯ ಸಂತೋಷ್ ಚಿತ್ರಮಂದಿರದಲ್ಲಿ ಉಪೇಂದ್ರ ದರ್ಬಾರ್ ಶುರುವಾಗಲಿದೆ. ಈ ಹಿಂದೆ ಉಪೇಂದ್ರ ಮತ್ತು ಸುದೀಪ್ ಮುಕುಂದ-ಮುರಾರಿ ಹಾಗೂ ಕಬ್ಜ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಿದ್ದರು.