ಯುಐ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

ಉಪೇಂದ್ರ ನಟನೆಯ ಬಹುನಿರೀಕ್ಷಿತ ಚಿತ್ರ ನಾಳೆ ತೆರೆಗೆ: 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ UI ಅಬ್ಬರ

ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.

ರಿಯನ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ ಯುಐ ಚಿತ್ರ ನಾಳೆ (ಡಿ.20) ವಿಶ್ವದಾದ್ಯಂತ 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, 9 ವರ್ಷಗಳ ನಂತರ ಉಪೇಂದ್ರ ನಿರ್ದೇಶನದಲ್ಲಿ ಬರುತ್ತಿರುವ ಈ ಸಿನಿಮಾ ಬಗ್ಗೆ ಜನರಲ್ಲಿ ಕುತೂಹಲ ಮನೆ ಮಾಡಿದೆ.

ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.

‘ಯುಐ’ ಚಿತ್ರದಲ್ಲಿ ಹಲವು ವಿಶೇಷಗಳಿದ್ದು, ಈ ಪೈಕಿ ಆಧುನಿಕ ತಂತ್ರಜ್ಞಾನಗಳ ಬಳಕೆ ಕೂಡ ಒಂದಾಗಿದೆ. ಜೊತೆಗೆ ಇದರ ಇಡೀ ಚಿತ್ರೀಕರಣವನ್ನು ಕತ್ತಲೆಯಲ್ಲಿಯೇ ಮಾಡಿರುವುದು ಮತ್ತೊಂದು ವಿಶೇಷ. ಸಾಮಾನ್ಯವಾಗಿ ಇರುಳಿನ ದೃಶ್ಯಗಳನ್ನು ಇರುಳಿನಲ್ಲೇ ಚಿತ್ರೀಕರಣ ಮಾಡಲಾಗುತ್ತದೆ ಅಥವಾ ಹಗಲಿನಲ್ಲಿ ಚಿತ್ರೀಕರಣ ಮಾಡಿ ನೈಟ್‌ ಎಫೆಕ್ಟ್ ನೀಡಲಾಗುತ್ತದೆ. ಇದನ್ನು ಡೇ ಫಾರ್‌ ನೈಟ್‌ ಎನ್ನಲಾಗುತ್ತದೆ. ಆದರೆ ‘ಯುಐ’ ಚಿತ್ರದಲ್ಲಿ‘ನೈಟ್‌ ಫಾರ್‌ ಡೇ’ ಕಾನ್ಸೆಪ್ಟ್‌ ಬಳಸಲಾಗಿದೆ. ‘ನೈಟ್‌ ಫಾರ್‌ ಡೇ’ ಪ್ರಯೋಗ ಮಾಡಿರುವುದು ಅಪರೂಪ. ಸ್ಯಾಂಡಲ್‌ವುಡ್‌ನಲ್ಲಿ ಇದೇ ಮೊದಲಾಗಿದೆ.

ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಣವಿದೆ. ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್ ಚಂದ್ರು ಮನೋಹನ್ ಹಾಗೂ ನಾಗೇಂದ್ರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ವಿ.ಎನ್.ಪ್ರೊಡಕ್ಷನ್ಸ್ ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT