ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ವಿರುದ್ಧದ ಹೊಸ ಆರೋಪದ ನಡುವೆ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಯಾವುದೇ ರೀತಿಯ ಅಸಭ್ಯ ಭಾಷೆ ಬಳಸಬೇಡಿ ಎಂದು ಅಭಿಮಾನಿಗಳಿಗೆ ಅಲ್ಲ ಅರ್ಜುನ್ ಅವರು ಕಿವಿಮಾತು ಹೇಳಿದ್ದಾರೆ.
ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.
ಈ ಕುರಿತು ಶನಿವಾರ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಥಿಯೇಟರ್ ಗೆ ಬರಬೇಡಿ ಎಂದು ಪೊಲೀಸರು ಹೇಳಿದ್ದರೂ ಲೆಕ್ಕಿಸದೆ ಬಂದು ಸಿನಿಮಾ ನೋಡಿದ್ದಾರೆ. ಥಿಯೇಟರ್ ಗೆ ಬರುವಾಗ ಕಾರಿನ ಸನ್ ರೂಫ್ ತೆಗೆದು ಅಲ್ಲಿ ರೋಡ್ ಶೋ ಮಾಡಿಕೊಂಡು ಬಂದಿದ್ದಾರೆ. ಇದರಿಂದ ಆ ಥಿಯೇಟರ್ ನ ಪ್ರೇಕ್ಷಕರು ಮಾತ್ರವಲ್ಲ. ಅದೇ ರಸ್ತೆಯಲ್ಲಿದ್ದ ಇತರೆ ಥಿಯೇಟರ್ ಗಳಲ್ಲಿದ್ದ ಪ್ರೇಕ್ಷಕರೂ ಕೂಡ ಸಂಧ್ಯಾ ಥಿಯೇಟರ್ ಗೆ ದೌಡಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಆರೋಪಿಸಿದ್ದರು.
ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಅಸಭ್ಯ, ನಿಂದನಾತ್ಮಕ ಫೋಸ್ಟ್ ಹಾಕಲಾಗುತ್ತಿದ್ದು, ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಅಸಭ್ಯ, ನಿಂದನಾತ್ಮಕ ಫೋಸ್ಟ್ ಹಾಕಲಾಗುತ್ತಿದ್ದು, ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅದೇ ರೀತಿ ನಕಲಿ ಖಾತೆಗಳ ಮೂಲಕ ನನ್ನ ಅಭಿಮಾನಿಗಳು ಎಂದು ಹೇಳಿಕೊಂಡು ಯಾರಾದರೂ ಅಶ್ಲೀಲ ಭಾಷೆ ಬಳಕೆ ಮಾಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.