ಬೆಂಗಳೂರು ಫಿಲಂ ಸಿಟಿಯಲ್ಲಿ ನಡೆದ ವರ್ಣವೇ ವರ್ಣವೇ ಹಾಡಿನ ಚಿತ್ರೀಕರಣ 
ಸಿನಿಮಾ ಸುದ್ದಿ

ನಾನು ಮತ್ತು ಗುಂಡ ಚಿತ್ರದ ನಿರ್ದೇಶಕರ ಹೊಸ ಚಿತ್ರ 'ವರ್ಣವೇದಂ'; ಸ್ಯಾಂಡಲ್‌ವುಡ್‌ಗೆ ನೈರುತ್ಯ, ಪ್ರತೀಕ್ಷಾ ಪದಾರ್ಪಣೆ

ವರ್ಣವೇದಂ ಬಣ್ಣದ ಬಗೆಗಿನ ಸಿನಿಮಾವಾಗಿದ್ದು, 'ಕಲರ್ ಮಾಫಿಯಾ' ಚಿತ್ರದ ಪ್ರಮುಖ ಕಥಾವಸ್ತುವಾಗಿದೆ. ನೋಡುಗನಿಗೆ ಬೇಕಾದ ಎಲ್ಲ ಅಂಶಗಳನ್ನೊಳಗೊಂಡ ಸದಭಿರುಚಿಯ ಚಿತ್ರವಿದು ಎನ್ನುತ್ತಾರೆ ಶ್ರೀನಿವಾಸ್ ತಿಮ್ಮಯ್ಯ.

2020ರ ನಾನು ಮತ್ತು ಗುಂಡ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀನಿವಾಸ್ ತಿಮ್ಮಯ್ಯ ಇದೀಗ ವರ್ಣವೇದಂ ಎಂಬ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಮೊಹಮ್ಮದ್ ಗೌಸ್ ಒಡೆತನದ ಹೊಸದಾಗಿ ನಿರ್ಮಿಸಿರುವ 'ಬೆಂಗಳೂರು ಫಿಲ್ಮ್ ಸಿಟಿ' ಎಂಬ ಅತ್ಯಾಧುನಿಕ ಸ್ಟುಡಿಯೋದಲ್ಲಿ ಚಿತ್ರದ ಶೀರ್ಷಿಕೆ ಗೀತೆಯನ್ನು ಇತ್ತೀಚೆಗೆ ಚಿತ್ರೀಕರಿಸಲಾಯಿತು. ಗಮನಿಸಬೇಕಾದ ಅಂಶವೆಂದರೆ, ಮೇಲೆ ಹೇಳಿದ ಸ್ಟುಡಿಯೋದಲ್ಲಿ ಚಿತ್ರೀಕರಿಸಿದ ಮೊದಲ ಚಿತ್ರ 'ವರ್ಣವೇದಂ'.

'ನಾನು ಮತ್ತು ಗುಂಡ' ಸಿನಿಮಾದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಶ್ರೀನಿವಾಸ್ ತಿಮ್ಮಯ್ಯ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಚಂದ್ರಶೇಖರ್, ವಿಶ್ವನಾಥ್, ಶೈಜು ಹಾಗೂ ರಾಜೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಾಯಕ ನೈಋತ್ಯ ಹಾಗೂ ನಾಯಕಿ ಪ್ರತೀಕ್ಷಾ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಡಿಗೆ ಮೋಯಿನ್ ಮಾಸ್ಟರ್ ನೃತ್ಯ ಸಂಯೋಜಿಸುತ್ತಿದ್ದು, ಗಗನ್ ಭಡೇರಿಯಾ ಅವರ ಸಂಗೀತ ಸಂಯೋಜನೆಯಿದೆ. ರಜತ್ ಹೆಗಡೆ ಹಾಗೂ ತನುಷಾ ಹಾಡಿಗೆ ಧ್ವನಿಯಾಗಿದ್ದಾರೆ. 'ವರ್ಣವೇ ವರ್ಣವೇ' ಎಂಬ ಈ ಶೀರ್ಷಿಕೆ ಗೀತೆಯನ್ನು ಪ್ರತಾಪ್ ಭಟ್ ಬರೆದಿದ್ದಾರೆ ಎಂದು ಶ್ರೀನಿವಾಸ್ ತಿಮ್ಮಯ್ಯ ಹೇಳಿದರು.

ಇನ್ನು ಎರಡು ಹಾಡುಗಳು ಮತ್ತು ಒಂದು ಸಾಹಸ ದೃಶ್ಯದ ಚಿತ್ರೀಕರಣ ಬಾಕಿ ಉಳಿದಿದ್ದು, ವರ್ಣವೇದಂ ಸಿನಿಮಾದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದೆ. ವರ್ಣವೇದಂ ಬಣ್ಣದ ಬಗೆಗಿನ ಸಿನಿಮಾವಾಗಿದ್ದು, 'ಕಲರ್ ಮಾಫಿಯಾ' ಚಿತ್ರದ ಪ್ರಮುಖ ಕಥಾವಸ್ತುವಾಗಿದೆ. ನೋಡುಗನಿಗೆ ಬೇಕಾದ ಎಲ್ಲ ಅಂಶಗಳನ್ನೊಳಗೊಂಡ ಸದಭಿರುಚಿಯ ಚಿತ್ರವಿದು ಎನ್ನುತ್ತಾರೆ ಶ್ರೀನಿವಾಸ್ ತಿಮ್ಮಯ್ಯ.

ಮೂಲತಃ ರಂಗಭೂಮಿ ಕಲಾವಿದನಾಗಿರುವ ನನಗೆ ಇದು ನಾಯಕನಾಗಿ ಮೊದಲ ಚಿತ್ರ. ನನ್ನ ಪಾತ್ರದ ಹೆಸರು ವೇದಾಂತ್ ಆಗಿದ್ದು, ಚಿತ್ರದಲ್ಲಿ ನಾ‌ನು ಮ್ಯೂಸಿಷಿಯನ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕ ನೈಋತ್ಯ ತಿಳಿಸಿದರು.

ಮೂಲತಃ ಮಂಗಳೂರಿನವಳಾದ ನನಗೆ ಇದು ಚೊಚ್ಚಲ ಚಿತ್ರ. ವರ್ಣ ನನ್ನ ಪಾತ್ರದ ಹೆಸರು. ವರ್ಣಾಧಾರಿತ ಕಥಾಹಂದರದಲ್ಲಿ ನನ್ನ ಪಾತ್ರ ಪ್ರಮುಖ ಪಾತ್ರ ವಹಿಸುತ್ತದೆ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಹೇಳುತ್ತಾರೆ ನಾಯಕಿ ಪ್ರತೀಕ್ಷಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel