ಸುದೀಪ್ 
ಸಿನಿಮಾ ಸುದ್ದಿ

ವ್ಯಂಗ್ಯ ಸಾಕು ಮಾಡಿ, ಬೇರೆ ನಟರ ಜೊತೆಗಿನ ಪೈಪೋಟಿಗಾಗಿ ಅಪ್‌ಡೇಟ್ ಕೊಡೋಕ್ಕಾಗಲ್ಲ: ಸುದೀಪ್

ಎಲ್ಲಾ ಸ್ನೇಹಿತರಿಗೆ ಶುಭೋದಯ, ಪ್ರೀತಿ ತುಂಬಿದ ಅಪ್ಪುಗೆ. ಅಪ್‌ಡೇಟ್ಸ್ ಬಗ್ಗೆ ಹರಿದುಬರುತ್ತಿರುವ ಟ್ವೀಟ್‌ಗಳನ್ನು ನೋಡಿ ಖುಷಿಯಾಗುತ್ತದೆ. ಆದರೆ ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್‌ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 'ಮ್ಯಾಕ್ಸ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದು ಕಡೆ ಸಿಸಿಎಲ್‌ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಓಟಿಟಿಯಲ್ಲಿ ಬಿಗ್‌ಬಾಸ್ ಶೋ ಬರುತ್ತದೆ ಎನ್ನುವ ಗುಸುಗುಸು ಕೇಳಿಬರ್ತಿದೆ. ಇನ್ನು 'ಮ್ಯಾಕ್ಸ್' ಸಿನಿಮಾ ಅಪ್‌ಡೇಟ್ ಕೇಳಿ ಕೇಳಿ ಅಭಿಮಾನಿಗಳು ಸುಸ್ತಾಗಿದ್ದಾರೆ.

'ವಿಕ್ರಾಂತ್ ರೋಣ' ಸಿನಿಮಾ ಬಂದು ಒಂದೂವರೆ ವರ್ಷ ಕಳೆದಿದೆ. ಆ ಬಳಿಕ ಕಿಚ್ಚನ ಯಾವುದೇ ಸಿನಿಮಾ ಬಂದಿಲ್ಲ. ಇನ್ನು ಬರೋಬ್ಬರಿ 1 ವರ್ಷದ ಬಿಡುವಿನ ಬಳಿಕ ಸುದೀಪ್ 'ಮ್ಯಾಕ್ಸ್' ಸಿನಿಮಾ ಘೋಷಣೆ ಮಾಡಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ಭರದಿಂದ ಚಿತ್ರೀಕರಣ ನಡೀತಿದೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು 'ಮ್ಯಾಕ್ಸ್' ಸಿನಿಮಾ ಅಪ್‌ಡೇಟ್ ಕೇಳುತ್ತಲೇ ಇರುತ್ತಾರೆ. ಈ ಬಗ್ಗೆ ಸುದೀಪ್‌ಗೆ ಉತ್ತರಿಸಿ ಸಾಕಾಗಿದ್ದಾರೆ. ಅಭಿಮಾನಿಗಳ ಪ್ರೀತಿಯನ್ನು ಕಾತುರತೆಯನ್ನು ಅರ್ಥ ಮಾಡಿಕೊಂಡಿರುವ ಸುದೀಪ್ ಈ ಬಗ್ಗೆ ಮತ್ತೊಮ್ಮೆ ಕಿಚ್ಚ ಪ್ರತಿಕ್ರಿಯಿಸಿದ್ದಾರೆ.

"ಎಲ್ಲಾ ಸ್ನೇಹಿತರಿಗೆ ಶುಭೋದಯ, ಪ್ರೀತಿ ತುಂಬಿದ ಅಪ್ಪುಗೆ. ಅಪ್‌ಡೇಟ್ಸ್ ಬಗ್ಗೆ ಹರಿದುಬರುತ್ತಿರುವ ಟ್ವೀಟ್‌ಗಳನ್ನು ನೋಡಿ ಖುಷಿಯಾಗುತ್ತದೆ. ಆದರೆ ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್‌ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ. ಚಿತ್ರತಂಡ ಏನಾದರೂ ರಿಲೀಸ್ ಮಾಡಲು ಅಥವಾ ಘೋಷಿಸಲು ಸಿದ್ಧವಿದ್ದಾಗ ಮಾತ್ರ ಅಪ್‌ಡೇಟ್ ಕೊಡಲು ಸಾಧ್ಯ. ನನ್ನ ಕೆಲಸದ ಬಗ್ಗೆ ಫ್ಯಾನ್ಸ್‌ ತೋರಿಸಿದ ಪ್ರೀತಿಗೆ ನಾನು ಆಭಾರಿ. ಆದರೆ ಬಿಗ್‌ಬಾಸ್ ಅಥವಾ ಸಿಸಿಎಲ್‌ ಮೇಲಿನ ವ್ಯಂಗ್ಯ ಸರಿಯಲ್ಲ. ಇದು ಚಿತ್ರದ ಕಡೆಗೆ ಒಬ್ಬರ ಆಸಕ್ತಿ, ಕುತೂಹಲವನ್ನು ಪ್ರದರ್ಶಿಸುವ ಮಾರ್ಗವಲ್ಲ. ‘ಮ್ಯಾಕ್ಸ್’ ಸಿನಿಮಾ ಚೆನ್ನಾಗಿ ರೂಪುಗೊಳುತ್ತಿದೆ. ನಾವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಫ್ಯಾನ್ಸ್‌ ರಂಜಿಸಲು ಪ್ರಯತ್ನಿಸುತ್ತಿದ್ದೇನೆ. ಮನರಂಜಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸುದೀಪ್ ಟ್ವೀಟ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಸರಿ ಸರ್, ಇನ್ನು ಮುಂದೆ 'ಮ್ಯಾಕ್ಸ್' ಅಪ್‌ಡೇಟ್ ಕೇಳಿ ಕಾಟ ಕೊಡಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್