ಸತ್ಯ ಪ್ರಕಾಶ್ 
ಸಿನಿಮಾ ಸುದ್ದಿ

'X & Y' ಸಿನಿಮಾ ಪ್ರೋಮೋ ರಿಲೀಸ್​: ಹಾಸ್ಯ ಚಿತ್ರಕ್ಕೆ ಸತ್ಯ ಪ್ರಕಾಶ್ ಆ್ಯಕ್ಷನ್-ಕಟ್

ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳನ್ನ ಗೆದ್ದಿರುವ ನಿರ್ದೇಶಕ ಡಿ ಸತ್ಯ ಪ್ರಕಾಶ್ ಈ ಬಾರಿ ನಿರ್ದೇಶನದ ಜೊತೆಗೆ ನಾಯಕ ನಟನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 'X & Y' ಎಂಬ ಟೈಟಲ್​ ಇಟ್ಟುಕೊಂಡು ತೆರೆ ಮೇಲೆ ಬರಲು ಮುಂದಾಗಿದ್ದಾರೆ.

ರಾಮಾ ರಾಮಾ ರೇ, ಒಂದಲ್ಲಾ ಎರಡಲ್ಲಾ ಹಾಗೂ ಮ್ಯಾನ್​ ಆಫ್ ದಿ ಮ್ಯಾಚ್ ಸಿನಿಮಾಗಳ ಮೂಲಕ ಕನ್ನಡಿಗರಿಗೆ ಪರಿಚಯವಾದ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳನ್ನ ಗೆದ್ದಿರುವ ನಿರ್ದೇಶಕ ಡಿ ಸತ್ಯ ಪ್ರಕಾಶ್ ಈ ಬಾರಿ ನಿರ್ದೇಶನದ ಜೊತೆಗೆ ನಾಯಕ ನಟನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 'X & Y' ಎಂಬ ಟೈಟಲ್​ ಇಟ್ಟುಕೊಂಡು ತೆರೆ ಮೇಲೆ ಬರಲು ಮುಂದಾಗಿದ್ದಾರೆ.

ಈವರೆಗೂ ಸಿನಿಮಾ ನಿರ್ಮಾಣ ಜೊತೆಗೆ ನಿರ್ದೇಶನ ಮಾಡಿದ್ದ ಸತ್ಯ ಪ್ರಕಾಶ್ ಅವರು ಇದೇ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ನಟನೆಗಿಳಿದಿದ್ದಾರೆ.

ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ಈಗಾಗಲೇ ಚಿತ್ರತಂಡ ಬಿಡುಗಡೆ ಮಾಡಿದೆ. ಈ ನಡುವೆ ಪ್ರೇಮಿಗಳ ದಿನಾಚರಣೆಯ ಪ್ರಯುಕ್ತ ನಿನ್ನೆ X&Y ಸಿನಿಮಾದ ಪ್ರೋಮೋ ಝಲಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಇದು ಇವತ್ತಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ –ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ ಕಥೆ, ಇವತ್ತಿನ ಮಕ್ಕಳ ಕಥೆ. ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು, ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಅದರಲ್ಲೂ ನಗುನಗುತ್ತಾ ನೋಡುವಂತಹ ಕಥೆಯಾಗಿ ನಿಮ್ಮ ಮುಂದೆ ತರುತ್ತಿದ್ದೇವೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಯುತ್ತಿದೆ ಎಂದು ಚಿತ್ರದ ಕುರಿತು ಸತ್ಯ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ವಾಸುಕಿ-ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ, ವರದರಾಜ್ ಕಾಮತ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ಅಥರ್ವ ಪ್ರಕಾಶ, ಬೃಂದಾ ಆಚಾರ್ಯ, ಅಯನ, ಸುಂದರ್ ವೀಣಾ, ವೀಣಾ ಸುಂದರ್, ದೊಡ್ಡಣ್ಣ ಹೀಗೆ ಹಿರಿಯ ಮತ್ತು ಹೊಸ ಕಲಾವಿದರ ಸಂಗಮ ಚಿತ್ರದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT