ಸೆಂಥಿಲ್ ಕುಮಾರ್ ಮತ್ತು ಪತ್ನಿ ರೂಹಿ 
ಸಿನಿಮಾ ಸುದ್ದಿ

ರಾಜಮೌಳಿ ನಿರ್ದೇಶನದ 'RRR' ಸಿನಿಮಾ ಕ್ಯಾಮರಾಮೆನ್ ಸೆಂಥಿಲ್ ಕುಮಾರ್ ಪತ್ನಿ ನಿಧನ

ಎಸ್​ಎಸ್ ರಾಜಮೌಳಿ ಅವರ ಮೆಚ್ಚಿನ ಸಿನಿಮಾಟೋಗ್ರಾಫರ್ ಕೆಕೆ ಸೆಂಥಿಲ್ ಕುಮಾರ್ ಅವರ ಪತ್ನಿ ಮತ್ತು ಯೋಗ ತರಬೇತುಗಾರ್ತಿ ರೂಹಿ (ರುಹೀನಾಜ್) ಫೆ.15ರಂದು ನಿಧನರಾದರು. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದಾಗಿ ಬಳಲುತ್ತಿದ್ದರು ಎನ್ನಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೇ ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ರೂಹಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. 2009ರಲ್ಲಿ ಸೆಂಥಿಲ್ ಮತ್ತು ರೂಹಿ ಹೊಸ ಜೀವನಕ್ಕೆ ಕಾಲಿಟ್ಟದ್ದರು. ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ.

ಕೋವಿಡ್ ಗೆ ತುತ್ತಾದ ನಂತರ ರೂಹಿ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿರಂತರವಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೂ, ಅವರ ಆರೋಗ್ಯ ಸುಧಾರಿಸಲಿಲ್ಲ ಎಂದು ಹೇಳಲಾಗುತ್ತಿದೆ. ಕೊನೆಗೂ ಅಂಗಾಂಗ ವೈಫಲ್ಯದಿಂದಾಗಿ ರೂಹಿ ಸಾವು ಕಂಡಿದ್ದಾರೆ.

ರೂಹಿ ಅವರು ಫೆ. 15ರ ಮಧ್ಯಾಹ್ನ 2 ಗಂಟೆಗೆ ನಿಧನರಾದರು. ಅಂತಿಮ ವಿಧಿವಿಧಾನಗಳು (ಶುಕ್ರವಾರ ಫೆ. 16) ಬೆಳಗ್ಗೆ 9 ಗಂಟೆಗೆ ಜುಬಿಲಿ ಹಿಲ್ಸ್‌ನ ಮಹಾಪ್ರಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬ ಮಾಹಿತಿ ಹಂಚಿಕೊಂಡಿತ್ತು.

ರೂಹಿ ಅವರು ಅನುಷ್ಕಾ, ಪ್ರಭಾಸ್ ಮತ್ತು ಇಲಿಯಾನಾ ಡಿಕ್ರೂಜ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳಿಗೆ ಯೋಗ ತರಬೇತುದಾರರಾಗಿದ್ದರು. ಹೈದರಾಬಾದ್ ವಿಭಾಗಕ್ಕೆ ಭರತ್ ಠಾಕೂರ್ ಅವರ ಯೋಗ ತರಗತಿಗಳ ಮುಖ್ಯಸ್ಥರಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT