ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ, ಪ್ರಾಣಾಪಾಯದಿಂದ ಪಾರು

ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೂದಲೆಳೆ ಅಂತರದಲ್ಲಿ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬೈ: ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೂದಲೆಳೆ ಅಂತರದಲ್ಲಿ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಮಾನ ತುರ್ತು ಭೂಸ್ಪರ್ಶ ಮಾಡಿದ ವೇಳೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆ ನಟಿ ಮತ್ತು ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ರಶ್ಮಿಕಾ ಸುರಕ್ಷಿತರಾಗಿದ್ದಾರೆ. ಅವರು ವಿಮಾನದಲ್ಲಿ ಕುಳಿತಿರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಆತಂಕದ ಕ್ಷಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಈ ಅನುಭವವನ್ನು ಹಂಚಿಕೊಂಡಿರು ಅವರು, ʼʼಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆʼʼ ಎಂದು ಬರೆದುಕೊಂಡಿದ್ದಾರೆ.

ರಶ್ಮಿಕಾ ಜತೆ ಈ ವೇಳೆ ನಟಿ ಶ್ರದ್ಧಾ ದಾಸ್ ಕೂಡ ಇದ್ದರು.ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ ಏರ್‌ ವಿಸ್ತಾರ (Air Vistara) ವಿಮಾನವು ಮುಂಬೈಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿತ್ತು. ಮುಂಬೈ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ 30 ನಿಮಿಷಗಳ ನಂತರ ವಿಮಾನ ಮತ್ತೆ ಮುಂಬೈಗೆ ಮರಳಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT