ಷಣ್ಮುಖ್ ಜಸ್ವಂತ್ 
ಸಿನಿಮಾ ಸುದ್ದಿ

ಡ್ರಗ್ಸ್ ಸೇವಿಸುವಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಬಿಗ್ ಬಾಸ್ ಸ್ಪರ್ಧಿ!

ಬಿಗ್ ಬಾಸ್ ತೆಲುಗು ಸ್ಪರ್ಧಿ ಮತ್ತು ಸೋಷಿಯಲ್ ಮೀಡಿಯಾ ಸ್ಟಾರ್ ಷಣ್ಮುಖ್ ಜಸ್ವಂತ್ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ಷಣ್ಮುಖ್ ರಾಶ್ ಡ್ರೈವಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದರು. ಇದೀಗ ಡ್ರಗ್ಸ್ ಸೇವಿಸುತ್ತಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಿಗ್ ಬಾಸ್ ತೆಲುಗು ಸ್ಪರ್ಧಿ ಮತ್ತು ಸೋಷಿಯಲ್ ಮೀಡಿಯಾ ಸ್ಟಾರ್ ಷಣ್ಮುಖ್ ಜಸ್ವಂತ್ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ಷಣ್ಮುಖ್ ರಾಶ್ ಡ್ರೈವಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದರು. ಇದೀಗ ಡ್ರಗ್ಸ್ ಸೇವಿಸುತ್ತಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಸದ್ಯ ಯೂಟ್ಯೂಬರ್ ಷಣ್ಮುಖ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ಪೊಲೀಸರು ಷಣ್ಮುಖ್ ಸಹೋದರನ ಮನೆಗೆ ಹೋದಾಗ ಅಲ್ಲಿ ಷಣ್ಮುಖ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ. ಷಣ್ಮುಖ್ ಸಹೋದರ ಸಂಪತ್ ವಿನಯ್ ಮದುವೆಯಾಗಿ ಆರೇ ದಿನಗಳಲ್ಲಿ ಬೇರೊಬ್ಬ ಯುವತಿಯನ್ನು ಮದುವೆಯಾಗಿದ್ದಾನೆ. ಈ ಪ್ರಕರಣದ ಬಗ್ಗೆ ವಿಚಾರಿಸಲು ಪೊಲೀಸರು ಅಲ್ಲಿಗೆ ಹೋದಾಗ, ಆ ಫ್ಲಾಟ್‌ನಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ಅಣ್ಣ ಮತ್ತು ತಮ್ಮನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಯೂಟ್ಯೂಬರ್ ಷಣ್ಮುಖ್ ಈ ಹಿಂದೆ ಮದ್ಯದ ಅಮಲಿನಲ್ಲಿ ಅತಿವೇಗದಲ್ಲಿ ಚಾಲನೆ ಮಾಡಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದರು. ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಯೂಟ್ಯೂಬ್ ನಲ್ಲಿ ರಾತ್ರೋರಾತ್ರಿ ಸ್ಟಾರ್ ಆದ ಷಣ್ಮುಖ್ ಜಸ್ವಂತ್ ಸತತವಾಗಿ ಈ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಷಣ್ಮುಖ್ ಜಸ್ವಂತ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಜನಪ್ರಿಯರಾಗಿದ್ದಾರೆ. ವೆಬ್ ಸೀರಿಸ್ ನಲ್ಲಿ ತುಂಬಾ ಸೌಮ್ಯವಾಗಿ ಕಾಣುವ ಷಣ್ಮುಖ್ ನಿಜ ಜೀವನದಲ್ಲಿ ಬ್ಯಾಡ್ ಬಾಯ್ ಎಂದೇ ಗುರುತಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT