ನಟ ಜಗ್ಗೇಶ್ 
ಸಿನಿಮಾ ಸುದ್ದಿ

ತಮ್ಮ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ನಟ ಜಗ್ಗೇಶ್!

ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಜಗ್ಗೇಶ್ ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲವು ಮಾಧ್ಯಮಗಳಲ್ಲಿ ಅವರ ಹೆಸರಿನಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇದೀಗ ಜಗ್ಗೇಶ್‌ ಅವರು ತಮ್ಮ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಟೀಕೆ ಮಾಡುವವರಿಗೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ವರ್ತೂರು ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಜಗ್ಗೇಶ್‌ ಕೂಡಲೇ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT