ಕಾಟೇರ ಸಿನಿಮಾದ ಸ್ಟಿಲ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ದರ್ಶನ್ ಅಭಿನಯದ ಕಾಟೇರ ಅಬ್ಬರ; ಮೂರೇ ದಿನದಲ್ಲಿ ದಾಖಲೆಯ ಗಳಿಕೆ!

ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.

ಬೆಂಗಳೂರು: ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.

ಡಿಸೆಂಬರ್ 29ರಂದು ಚಿತ್ರ ರಾಜ್ಯದಾದ್ಯಂತ ತೆರೆಕಂಡಿದ್ದು, ಚಿತ್ರ ಬಿಡುಗಡೆಯಾದ ಮೂರನೇ ದಿನಕ್ಕೆ ಕಾಟೇರ ಸಿನಿಮಾ ಬರೋಬ್ಬರಿ 20.94 ಕೋಟಿ ರೂ. ಸಂಗ್ರಹಿಸಿದೆ. ಮೊದಲನೇ ದಿನ ಕಾಟೇರ 19.79 ಕೋಟಿ ರೂ. ಗಳಿಸಿತ್ತು. ಎರಡನೇ ದಿನ 17.35 ಕೋಟಿ ರೂ. ಗಳಿಸಿತ್ತು. ಈ ಮೂಲಕ ಚಿತ್ರ ಮೂರು ದಿನಗಳಲ್ಲಿ ರಾಜ್ಯದಾದ್ಯಂತ ಒಟ್ಟು 58.8 ಕೋಟಿ ರೂ. ಸಂಗ್ರಹಿಸಿದೆ.

ದಿನದಿಂದ ದಿನಕ್ಕೆ ಕಾಟೇರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಹಲವು ಶೋಗಳನ್ನು ಹೆಚ್ಚಿಸಲಾಗಿದೆ. ದರ್ಶನ್ ಅಭಿಮಾನಿಗಳಷ್ಟೇ ಅಲ್ಲದೆ ಸಿನಿಪ್ರಿಯರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಭರ್ಜರಿ ಓಪನಿಂಗ್​ ಪಡೆದುಕೊಂಡಿರುವ ಕಾಟೇರ ಮೂರನೇ ದಿನ ಕೂಡ ಅಬ್ಬರಿಸಿದೆ. ಬಾಕ್ಸ್​ ಆಫೀಸ್​ನಲ್ಲಿ ತನ್ನ ನಾಗಾಲೋಟ ಮುಂದುವರೆಸಿದೆ. 

ದರ್ಶನ್ ಕೃತಜ್ಞತೆ

ಕಾಟೇರ ಸಿನಿಮಾದ ಯಶಸ್ಸಿಗೆ ಪ್ರತಿಕ್ರಿಯಿಸಿರುವ ನಟ ದರ್ಶನ್, ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಕಾಟೇರ ಚಿತ್ರತಂಡದ ಮನತುಂಬಿದೆ. ಮಾತೇ ಬರುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರದಲ್ಲಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. 

ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT