ಸಂಜು ವೆಡ್ಸ್ ಗೀತಾ-2 ಚಿತ್ರದಲ್ಲಿ ರಚಿತಾ ರಾಮ್ ಮತ್ತು ಶ್ರೀನಗರ ಕಿಟ್ಟಿ 
ಸಿನಿಮಾ ಸುದ್ದಿ

ಹಿಂದಿನ ಚಿತ್ರಕ್ಕೆ ಹೋಲಿಸಿದರೆ ಸಂಜು ವೆಡ್ಸ್ ಗೀತಾ- 2 ಹೆಚ್ಚು ವೈಭವಯುತವಾಗಿದೆ: ನಾಗಶೇಖರ್

ನಾಲ್ಕು ತಿಂಗಳ ಹಿಂದೆ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣವನ್ನು ಪ್ರಾರಂಭಿಸಿದ ನಿರ್ದೇಶಕ ನಾಗಶೇಖರ್ ಅವರು ತಂಡದೊಂದಿಗೆ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ಗೆ ತೆರಳಿದ್ದರು, ಅಲ್ಲಿ ನಿರ್ಣಾಯಕ ಭಾಗಗಳು ಮತ್ತು ಎರಡು ಹಾಡುಗಳನ್ನು ಚಿತ್ರೀಕರಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣವನ್ನು ಪ್ರಾರಂಭಿಸಿದ ನಿರ್ದೇಶಕ ನಾಗಶೇಖರ್ ಅವರು ತಂಡದೊಂದಿಗೆ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ಗೆ ತೆರಳಿದ್ದರು, ಅಲ್ಲಿ ನಿರ್ಣಾಯಕ ಭಾಗಗಳು ಮತ್ತು ಎರಡು ಹಾಡುಗಳನ್ನು ಚಿತ್ರೀಕರಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳ ಸೀಕ್ವೆಲ್​​​​ಗಳು ನಿರ್ಮಾಣಗೊಳ್ಳುತ್ತಿವೆ. 'ಸಂಜು ವೆಡ್ಸ್ ಗೀತಾ 2' ಕೂಡ ಹಿಟ್​​ ಸಿನಿಮಾದ ಸೀಕ್ವೆಲ್​​. ನಾಲ್ಕು ತಿಂಗಳ‌ ಹಿಂದೆ ಬಹುನಿರೀಕ್ಷಿತ ಚಿತ್ರ ಸೆಟ್ಟೇರಿತ್ತು. ಸದ್ಯ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್​ಲ್ಯಾಂಡ್​ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ನಿರ್ದೇಶಕ‌ ನಾಗಶೇಖರ್, ನಟ ಶ್ರೀನಗರ ಕಿಟ್ಟಿ, ನಟಿ ರಚಿತಾ ರಾಮ್ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ 'ಸಂಜು ವೆಡ್ಸ್ ಗೀತಾ 2' ಚಿತ್ರದ ಕಾರ್ಯಕ್ರಮದಲ್ಲಿ ಚಿತ್ರತಂಡ ಭಾಗವಹಿಸಿತ್ತು. ಸ್ವಿಟ್ಜರ್​ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್, ಹಿಂದಿನ‌‌ ಸಿನಿಮಾಗಿಂತ ಈ ಚಿತ್ರ ಚೆನ್ನಾಗಿ, ವೈಭವಯುತವಾಗಿ ಮೂಡಿ ಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್​ಲ್ಯಾಂಡ್​ನಲ್ಲಿ ಹಾಡುಗಳ ಶೂಟಿಂಗ್ ಮಾಡಿಕೊಂಡು ಬಂದಿದ್ದೇವೆ. ಮುಂಬೈ, ಹೈದರಾಬಾದ್​ನಲ್ಲಿ ಶೂಟಿಂಗ್ ಮಾಡಲಿದ್ದೇವೆ ಎಂದು ತಿಳಿಸಿದರು. ನಾಯಕ ನಟರಾದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅವರನ್ನು ಹೊಗಳಿದರು, ಇಬ್ಬರೂ ತಮ್ಮ ಪಾತ್ರವನ್ನು ಪರಿಪೂರ್ಣಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಸಂಜು ವೆಡ್ಸ್ ಗೀತಾ' ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದಲೇ ಎರಡನೇ ಭಾಗ ಇಷ್ಟು ಅದ್ಧೂರಿಯಾಗಿ ಮೂಡಿ ಬರುತ್ತಿದೆ. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ನನ್ನ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್​​ಮೇಟ್ ಕುಮಾರ್ ಕೈಜೋಡಿಸಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅದ್ಭುತವಾದ ಟ್ಯೂನ್​ಗಳನ್ನು ಮಾಡಿ ಕೊಟ್ಟಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಇಬ್ಬರೂ ಅದ್ಭುತ ಅಭಿನಯ ಮಾಡಿದ್ದಾರೆ. 2024ರ ಬ್ಲಾಕ್ ಬಸ್ಟರ್ ಚಿತ್ರವಾಗಿ 'ಸಂಜು ವೆಡ್ಸ್ ಗೀತಾ 2' ಹೊರಹೊಮ್ಮಲಿದೆ. ಇಂಥ ಒಳ್ಳೆ ನಿರ್ಮಾಪಕರು ನಮ್ಮ ಚಿತ್ರಕ್ಕೆ ಸಿಕ್ಕಿದ್ದಾರೆ. ಯಾವುದಕ್ಕೂ ಹಿಂದೇಟು ಹಾಕಲ್ಲ ಎಂದು ತಿಳಿಸಿದರು.

ಬಳಿಕ ನಾಯಕ ನಟ ಶ್ರೀನಗರ ಕಿಟ್ಟಿ ಮಾತನಾಡಿ, ಸ್ವಿಟ್ಜರ್​ಲ್ಯಾಂಡ್​ನಲ್ಲಿ ಮೈ ಕೊರೆಯುವ ಚಳಿ ಇತ್ತು. ಹಾಡುಗಳು ಬಹಳ ಚೆನ್ನಾಗಿ ಮೂಡಿ ಬಂದಿವೆ. ಅದನ್ನು ಹೇಳುವುದಕ್ಕಿಂತ, ನೋಡುವುದೇ ಚೆನ್ನ ಎಂದು ತಿಳಿಸಿದರು. ನಾಯಕಿ ರಚಿತಾ ರಾಮ್ ಮಾತನಾಡಿ, ಬಹಳ ಶೇಡ್ಸ್ ಇರುವಂಥ ಗೀತಾ ಪಾತ್ರ ನನ್ನದು. ಸಿನಿಮಾ ಅಂದ್ರೆ ಖುಷಿ, ಕಷ್ಟ ಎರಡೂ ಇರುತ್ತದೆ. ನಾವು ಡಿಸೆಂಬರ್ ಚಳಿಯಲ್ಲಿ ಹೋಗಿ ಶೂಟಿಂಗ್​ ಮಾಡಿದ್ದೇವೆ. ನಾಗಶೇಖರ್ ಅವರು ಏನು ಮಾಡಿದ್ರೂ ಬಹಳ ಪ್ಲಾನ್ಡ್ ಆಗಿ ಮಾಡ್ತಾರೆ. ನಮಗೆ ನೇಚರ್ ಕೂಡ ಬಹಳ ಸಪೋರ್ಟ್ ಮಾಡಿತು. ಅಲ್ಲಿ ಮಾಡಿದ ಎರಡು ಹಾಡುಗಳೂ ಬಹಳ ಚೆನ್ನಾಗಿ ಮೂಡಿ ಬಂದಿವೆ. ಲೊಕೇಶನ್ ಅದ್ಭುತ. ಸತ್ಯ ಹೆಗಡೆ ಸರ್ ಬೇರೆ ಬೇರೆ ಆ್ಯಂಗಲ್​​​ನಲ್ಲಿ ಶೂಟ್ ಮಾಡಿದ್ದಾರೆ. ಎಮೋಷನಲ್ ಸೀನ್ಸ್ ಇನ್ಟೆನ್ಸ್ ಆಗಿ ಬಂದಿದೆ ಎಂದು ತಿಳಿಸಿದರು.

ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಚಿತ್ರದ 5 ಸುಂದರ ಹಾಡುಗಳಿಗೆ ಸಂಗೀತ ನೀಡಿದ್ದು, ಕವಿರಾಜ್​ ಸಾಹಿತ್ಯವಿದೆ. ನಿರ್ಮಾಪಕ ಚಲವಾದಿ ಕುಮಾರ್ ಅವರು ಈ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್​ನ್ಯಾಷನಲ್ ಮೂವಿ ಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ಅಡಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ನಿರ್ದೇಶಕ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT