ಡ್ರೋನ್ ಪ್ರತಾಪ್ 
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 10: ಡ್ರೋನ್ ಪ್ರತಾಪ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭಗದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭಗದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಫುಡ್ ಪಾಯ್ಸನ್ ಆಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಡ್ರೋನ್ ಪ್ರತಾಪ್ ತಂದೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗುಲಿರಬಹುದಾ ಎಂದು ಕೆಲವರು ಸಂದೇಹ ವ್ಯಕ್ತಪಡಿಸಿದ್ದರೆ ಇನ್ನು ಕೆಲವರು ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂದು ಕೇಳುತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಯವರನ್ನು ಒತ್ತಾಯಿಸುತ್ತಿದ್ದಾರೆ. ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನು ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳುತ್ತಾರೆ. ಅವರಿಗೆ ವೋಟ್ ಮಾಡಿ ಎಂದು ಪೋಸ್ಟ್ ಮಾಡಿದ್ದಾರೆ.

ಔಟ್ ಆಫ್ ಡೇಂಜರ್: ಡ್ರೋನ್ ಪ್ರತಾಪ್ ಅವರದ್ದು ಸೂಸೈಡ್ ಅಟ್ಮೆಂಟ್ ಅಲ್ಲ, ಎರಡು ದಿನಗಳಿಂದ ಊಟ ಮಾಡದೆ ಅಸ್ವಸ್ಥರಾಗಿದ್ದರು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಗ್ ಬಾಸ್ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!