ಸಿನಿಮಾ ಸುದ್ದಿ

ಅಭಿಮಾನಿಗಳಿಗೆ ರಾಕಿಂಗ್ ಸ್ಟಾರ್ ಯಶ್ ಬಹಿರಂಗ ಪತ್ರ: ಇದೇ ಕಾರಣ!

Nagaraja AB

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಾರಣ, ಅವರ ಹುಟ್ಟುಹಬ್ಬವಾದ ಜನವರಿ 8 ರಂದು ಬೆಂಗಳೂರಿನಲ್ಲಿ ಇರುವುದಿಲ್ಲವಂತೆ. ಹಾಗಂತ ಅವರೇ ತಿಳಿಸಿದ್ದಾರೆ.  

ಹೌದು. ಮುಂದಿನ ಸಿನಿಮಾ ಟಾಕ್ಸಿಕ್ ಗಾಗಿ ಸಿದ್ಧತೆ ನಡೆಸುತ್ತಿರುವ ಯಶ್, ಚಿತ್ರೀಕರಣದಲ್ಲಿ ತೊಡಗಿರುವುದರಿಂದ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದ್ದು, ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಜನವರಿ 8 ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ ಎಂದು ಬರೆದುಕೊಂಡಿದ್ದಾರೆ. 

SCROLL FOR NEXT